ಮೊಂಟೆಪದವು: ಕಾಲೇಜು ಕಟ್ಟಡ ಕಾಮಗಾರಿ ಪರಿಶೀಲನೆ
ಕೊಣಾಜೆ, ಅ. 26: ಮೊಂಟೆಪದವಿನ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಚಿವ ಯು.ಟಿ.ಖಾದರ್ ಅವರ ಶಿಫಾರಸ್ಸಿನಂತೆ ಸುಮಾರು 50 ಲಕ್ಷ ರೂ ವೆಚ್ಚದಲ್ಲಿ ನೂತನ ಕಟ್ಟಡದ ಕಾಮಗಾರಿಯು ನಡೆಯುತ್ತಿದ್ದು, ಕಾಮಗಾರಿಯ ಪ್ರಗತಿ ಪರಿಶೀಲನೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಪಂ. ಅಧ್ಯಕ್ಷ ಚಂದ್ರಹಾಸ್ ಕರ್ಕೆರಾ, ಮುಡಿಪು ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಪ್ರಶಾಂತ್ ಕಾಜವ, ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ, ತಾಲೂಕು ಪಂ. ಸದಸ್ಯ ಹೈದರ್ ಕೈರಂಗಳ, ಬಾಳೆಪುಣಿ ಪಂ. ಸದಸ್ಯ ಹೈದರ್ ಕೈರಂಗಳ, ರಹ್ಮಾನ್ ಚಂದಹಿತ್ತಿಲು, ಸಮೀರ್ ಫಜೀರು, ಫಯಾಝ್ ಮೊಂಟೆಪದವು ಮೊದಲಾದವರು ಉಪಸ್ಥಿತರಿದ್ದರು.
Next Story