ಕೆ.ಜೆ.ಜಾರ್ಜ್ ರಕ್ಷಣೆ ಸಾಧ್ಯವಿಲ್ಲ: ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್

ಬೆಂಗಳೂರು, ಅ. 27: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಪ್ರಮುಖ ಆರೋಪಿ ಸಚಿವ ಜಾರ್ಜ್ ಅವರನ್ನು ರಕ್ಷಣೆ ಮಾಡಲು ಸಿಎಂ ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಆದರೆ, ಜಾರ್ಜ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.
ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ನಿರ್ದೇಶನದನ್ವಯ ಸಿಬಿಐ ಎಫ್‌ಐಆರ್ ದಾಖಲಿಸಿದೆ. ಸಿಬಿಐ ತನ್ನ ಕೆಲಸ ಮಾಡಿದೆ. ಆದರೆ, ಕೇಂದ್ರದ ಸರಕಾರದ ಸೂಚನೆಯಂತೆ ಜಾರ್ಜ್ ವಿರುದ್ಧ ಎಫ್‌ಐಆರ್ ದಾಖಲಿಸಿಲ್ಲ ಎಂದು ಪ್ರಕಾಶ್ ಜಾವಡೇಕರ್ ಟೀಕಿಸಿದರು.
Next Story





