ಇಂದಿರಾ ಜನ್ಮಶತಮಾನೋತ್ಸವ ಅಂಗವಾಗಿ ರಸಪ್ರಶ್ನೆ ಸ್ಪರ್ಧೆ
ಬೆಂಗಳೂರು, ಅ.27: ಮಾಜಿ ಪ್ರಧಾನಿ ಇಂದಿರಾಗಾಂಧಿಯ ಜನ್ಮಶತಮಾನೋತ್ಸವದ ಅಂಗವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಗೌಡ, ಎನ್‌ಎಸ್‌ಯುಐ ಅಧ್ಯಕ್ಷ ಎಚ್.ಎಸ್.ಮಂಜುನಾಥ ನೇತೃತ್ವದಲ್ಲಿ ಮಹಾಲಕ್ಷ್ಮೀ ಲೇಔಟ್‌ನ ಸ್ವಾಮಿ ವಿವೇಕಾನಂದ ಮೈದಾನದಲ್ಲಿ ಆಯೋಜಿಸಲಾಗಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ ಲ್ಯಾಪ್‌ಟಾಪ್ ಅನ್ನು ನಿಖಿಲ್, ದ್ವಿತೀಯ ಬಹುಮಾನವಾಗಿ ಟಿವಿ ಅನ್ನು ಸೋಮಶೇಖರ್ ಹಾಗೂ ತೃತೀಯ ಬಹುಮಾನವಾಗಿ ಬೈಸಿಕಲ್ ಅನ್ನು ಉಮರ್ ತಮ್ಮದನ್ನಾಗಿಸಿಕೊಂಡರು. ಸುಮಾರು 500 ವಿದ್ಯಾರ್ಥಿಗಳಿಗೆ ವಿವಿಧ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.
Next Story





