ಶಿವಮೊಗ್ಗ: ನ.1ಕ್ಕೆ ಕನ್ನಡ ರಾಜ್ಯೋತ್ಸವ
ಶಿವಮೊಗ್ಗ, ಅ.27: ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ನ.1ರಂದು ಬೆಳಗ್ಗೆ 9ಗಂಟೆಗೆ ನಗರದ ಡಿ.ಎ.ಆರ್.ಪೊಲೀಸ್ ಪೆರೇಡ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಿದೆ.
ಈ ಕಾರ್ಯಕ್ರಮವನ್ನು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ರಾಜ್ಯ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪಅವರು ಉದ್ಘಾಟಿಸುವರು.
ಸಂಸದ ಬಿ.ಎಸ್.ಯಡಿಯೂರಪ್ಪ, ಕರ್ನಾಟಕ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯಸಚೇತಕ ಗಣೇಶ್ ಕಾರ್ಣೀಕ್, ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್, ಸಿಇಒ ಡಾ.ಕೆ.ರಾಕೇಶ್‌ಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅಭಿನವ್‌ಖರೆ ಹಾಗೂ ಮಹಾನಗರಪಾಲಿಕೆ ಆಯುಕ್ತ ಮುಲ್ಲೈ ಮುಹಿಲನ್ ಅವರು ಉಪಸ್ಥಿತರಿರುವರು ಎಂದು ಪ್ರಕಟನೆ ತಿಳಿಸಿದೆ.
Next Story





