ಯುವತಿ ಮೇಲೆ ಅತ್ಯಾಚಾರ: ಆರೋಪಿ ಸೆರೆ

ಕೋಟ, ಅ.27: ಗುಂಡ್ಮಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯೊಬ್ಬನನ್ನು ಕೋಟ ಪೊಲೀಸರು ಅ.22ರಂದು ಬಂಧಿಸಿದ್ದಾರೆ.
ಬಂಧಿತನನ್ನು ಸಾಸ್ತಾನದ ಸುಹೈಲ್ ಮುಹಮ್ಮದಾಲಿ(27) ಎಂದು ಗುರುತಿಸಲಾಗಿದೆ. ಈತ ಮದುವೆಯಾಗುವುದಾಗಿ ಹೇಳಿ ಬೆದರಿಕೆ ಹಾಕಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದನ್ನೆಲಾಗಿದೆ. ಇದೀಗ ಯುವತಿ ಮಗುವಿಗೆ ಜನ್ಮ ನೀಡಿದ್ದಾಳೆ.
ಈ ಬಗ್ಗೆ ಯುವತಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಕೋಟ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
Next Story





