Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಸತಿ ಯೋಜನೆಗಳಿಗೆ ನಿವೇಶನ ಸಿದ್ದಪಡಿಸಿ:...

ವಸತಿ ಯೋಜನೆಗಳಿಗೆ ನಿವೇಶನ ಸಿದ್ದಪಡಿಸಿ: ಪ್ರಮೋದ್ ಮಧ್ವರಾಜ್

ವಾರ್ತಾಭಾರತಿವಾರ್ತಾಭಾರತಿ27 Oct 2017 11:24 PM IST
share
ವಸತಿ ಯೋಜನೆಗಳಿಗೆ ನಿವೇಶನ ಸಿದ್ದಪಡಿಸಿ: ಪ್ರಮೋದ್ ಮಧ್ವರಾಜ್

ಉಡುಪಿ, ಅ.27: ಜಿಲ್ಲೆಯಲ್ಲಿ ವಸತಿ ಯೋಜನೆಯಡಿ 2016-17ನೇ ಸಾಲಿನಲ್ಲಿ ಒಟ್ಟು 4,116 ಗುರಿ ನಿಗದಿಪಡಿಸಿದ್ದು, ಇವುಗಳಲ್ಲಿ 3,481 ಫಲಾನು ಭವಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಯೋಜನಾ ನಿರ್ದೇಶಕಿ ನಯನಾ, ಮಣಿಪಾಲದ ಜಿಪಂ ಸಭಾಂಗಣದಲ್ಲಿ ಸಚಿವ ಪ್ರಮೋದ್ ಮಧ್ವರಾಜ್ ಅಧ್ಯಕ್ಷತೆಯಲ್ಲಿ ಇಂದು ನಡೆದ ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಗೆ ಮಾಹಿತಿ ನೀಡಿದರು.

ಅರ್ಹರಿಗೆ ನಿವೇಶನ ಮತ್ತು ವಸತಿ ನೀಡುವ ಉದ್ದೇಶದ ವಸತಿ ಯೋಜನೆ ಗಳ ಬಗ್ಗೆ ಮಾಹಿತಿ ನೀಡಿದ ಅವರು, 2017-18ನೇ ಸಾಲಿನಲ್ಲಿ 97 ನಿವೇಶನ ರಹಿತರಿಗೆ ಹಕ್ಕುಪತ್ರ ನೀಡಲಾಗಿದೆ. ಪ್ರಸ್ತುತ 90 ಹಕ್ಕುಪತ್ರಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ವಸತಿ ಯೋಜನೆಗಾಗಿ 11.05 ಎಕರೆ ಜಮೀನು ಗುರುತಿಸ ಲಾಗಿದ್ದು ಫಲಾನುಭವಿಗಳ ಆಯ್ಕೆ, ಲೇಔಟ್ ರಚನೆ ಪ್ರಕ್ರಿಯೆ ಮುಗಿಸಿ ಪ್ರಸ್ತಾವನೆ ಸಲ್ಲಿಸಲಾಗುವುು ಎಂದರು.

ಸರಕಾರಿ ಸ್ಥಳ ಲ್ಯವಿಲ್ಲದ ಸ್ಥಳದಲ್ಲಿ ಎಕರೆಗೆ 9 ಲಕ್ಷ ರೂ.ಗಳಂತೆ ಖಾಸಗಿ ಜಾಗದಲ್ಲೂ ನಿವೇಶನಕ್ಕೆ ಸೂಕ್ತ ಸ್ಥಳ ಖರೀದಿಸಲು ನಿರ್ಧರಿಸಲಾಗಿದೆ. 94 ಸಿ, 94ಸಿಸಿಯಡಿ ಹಕ್ಕುಪತ್ರ ಪಡೆದ ಪರಿಶಿಷ್ಟ ಜಾತಿ, ಪಂಗಡದವರು ಅಂಬೇಡ್ಕರ್ ವಸತಿ ಯೋಜನೆಯಡಿ ಮನೆಗಾಗಿ ಗ್ರಾಪಂಗಳಿಗೆ ಕೂಡಲೇ ಅರ್ಜಿ ಸಲ್ಲಿಸಲು ಮಾಹಿತಿ ನೀಡಿ ಎಂದು ಸಚಿವರು ಸೂಚನೆ ನೀಡಿದರು.

ಕಾರ್ಮಿಕ ಇಲಾಖೆಯಿಂದ ಜಿಲ್ಲೆಯಲ್ಲಿ 27,109 ಕಾರ್ಮಿಕರನ್ನು ದಾಖಲಿಸಿ ಸವಲತ್ತುಗಳನ್ನು ನೀಡಲಾಗಿದೆ ಎಂದು ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತರು ಸಭೆಗೆ ಮಾಹಿತಿ ನೀಡಿದರು. ಕಾರ್ಮಿಕರಿರುವ ಪ್ರದೇಶಗಳಿಗೆ ಭೇಟಿ ನೀಡಿ ಅವರಿಗೆ ದೊರಕುವ ಸೌಲ್ಯಗಳ ಬಗ್ಗೆ, ಅವರ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ಈವರೆಗೆ ಒಟ್ಟು 1,869 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು 2.07 ಕೋಟಿ ರೂ. ಮೊತ್ತವನ್ನು ಶೈಕ್ಷಣಿಕ ಧನಸಹಾಯ, ಮದುವೆ ಧನ ಸಹಾಯ, ಹೆರಿಗೆ, ವೈದ್ಯಕೀಯ, ಪಿಂಚಣಿ ಸಹಾಯಧನವನ್ನು ವಿತರಿಸಲಾಗಿದೆ ಎಂದು ಅವರು ಸಭೆಗೆ ತಿಳಿಸಿದರು.

ಸುವರ್ಣಗ್ರಾಮ ಯೋಜನೆಯಡಿ ಎಲ್ಲ ಕ್ಷೇತ್ರಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದ್ದು, ಎರಡು ಕಾಮಗಾರಿಯ ಕ್ರಿಯಾಯೋಜನೆ ಬಾಕಿ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಂಕಿರಣದ ವ್ಯಾಪ್ತಿಯಲ್ಲಿ ವಸತಿ ಸಹಿತ ತರಬೇತಿ ಕೇಂದ್ರ ಒಂದು ಕೋಟಿ ರೂ.ಗಳಲ್ಲಿ ನಿರ್ಮಾಣಗೊಂಡಿದ್ದು, ಡಿಸೆಂಬರ್‌ನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದರು.

ಪಡಿತರ ಕಾರ್ಡ್ ವಿತರಣೆಯಲ್ಲಿ ಸಮಸ್ಯೆ ಪರಿಹರಿಸಲು ಪಿಡಿಒ ಮತ್ತು ಆಹಾರ ಇಲಾಖೆಯ ಅಧಿಕಾರಿಗಳ ಸಭೆ ನಡೆಸುವಂತೆ ಸಚಿವರು ಜಿಲ್ಲಾಧಿಕಾರಿ ಗಳಿಗೆ ಸೂಚಿಸಿದರು. ದೀನದಯಾಳ್ ವಿದ್ಯುದ್ಧೀಕರಣ ಯೋಜನೆಯಡಿ ವಿದ್ಯುತ್ ಸಂಪರ್ಕಕ್ಕೆ ಬಿಪಿಎಲ್ ಕಾರ್ಡ್ ಮಾತ್ರ ಸಾಕು ಎಂದ ಅವರು, ತಕ್ಷಣವೇ ಈ ಸಂಬಂಧ ಎಲ್ಲ ಪಿಡಿಒಗಳಿಗೆ ಸುತ್ತೋಲೆ ಕಳುಹಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚನೆ ನೀಡಿದರು.

ಕಾರ್ಕಳದಲ್ಲಿ ರಸ್ತೆ ಅಗಲೀಕರಣಕ್ಕೆ ಅಡಚಣೆಯಾಗಿರುವ ಮರಗಳನ್ನು ಗುರುತಿಸಿ ಕಡಿಯಲು ಅರಣ್ಯ ಇಲಾಖೆ ಮುಂದಾಗದ ಬಗ್ಗೆ ಶಾಸಕ ಸುನಿಲ್ ಕುಮಾರ್ ದೂರಿದರು. ಇಲ್ಲಿ ಅರಣ್ಯ ಇಲಾಖೆ, ಮೆಸ್ಕಾಂ, ಲೋಕೋಪಯೋಗಿ ಇಲಾಖೆಗಳ ನಡುವೆ ಹೊಂದಾಣಿಕೆಯೇ ಇಲ್ಲ ಎಂದರು. ಬಿಪಿಎಲ್ ಕಾರ್ಡುಗಳ ಕುರಿತಂತೆಯೂ ಸೆಯಲ್ಲಿ ಸಾಕಷ್ಟು ಚರ್ಚೆ ನಡೆಯಿತು.

ಸಭೆಯಲ್ಲಿ ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್‌ಚಂದ್ರ ಶೆಟ್ಟಿ, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆ.ಗೋಪಾಲ ಪೂಜಾರಿ, ಸುನೀಲ್ ಕುಮಾರ್, ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ್, ಎಸಿ ಶಿಲ್ಪಾನಾಗ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X