Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉ. ಪ್ರದೇಶ ಬಿಎಚ್‌ಯು ಆಸ್ಪತ್ರೆ : ಸಚಿವರ...

ಉ. ಪ್ರದೇಶ ಬಿಎಚ್‌ಯು ಆಸ್ಪತ್ರೆ : ಸಚಿವರ ಭೇಟಿಯ ಕಾರಣಕ್ಕೆ ಶಸ್ತ್ರ ಚಿಕಿತ್ಸೆಯನ್ನೇ ಮುಂದೂಡಿದರು....!

ವಾರ್ತಾಭಾರತಿವಾರ್ತಾಭಾರತಿ27 Oct 2017 11:24 PM IST
share
ಉ. ಪ್ರದೇಶ ಬಿಎಚ್‌ಯು ಆಸ್ಪತ್ರೆ : ಸಚಿವರ ಭೇಟಿಯ ಕಾರಣಕ್ಕೆ ಶಸ್ತ್ರ ಚಿಕಿತ್ಸೆಯನ್ನೇ ಮುಂದೂಡಿದರು....!

 ಲಕ್ನೊ, ಅ.27: ಮೂರು ದಿನಗಳ ಅರಿವಳಿಕೆ ಶಾಸ್ತ್ರದ ಕುರಿತ ಸಮ್ಮೇಳನ ನಡೆಯುವ ಕಾರಣ ಉತ್ತರ ಪ್ರದೇಶದ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಆಡಳಿತಕ್ಕೆ ಒಳಪಟ್ಟಿರುವ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸ್(ಐಎಂಎಸ್) ಮತ್ತು ಸರ್ ಸುಂದರ್‌ಲಾಲ್ ಆಸ್ಪತ್ರೆಯಲ್ಲಿ ಅಕ್ಟೋಬರ್ 27 ಮತ್ತು 28ರಂದು ಯಾವುದೇ ಶಸ್ತ್ರಚಿಕಿತ್ಸೆ ನಡೆಯುವುದಿಲ್ಲ ಎಂದು ಪ್ರಕಟಿಸಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಆಸ್ಪತ್ರೆಯಲ್ಲಿ ಹಾಗೂ ತುರ್ತುಚಿಕಿತ್ಸಾ ಘಟಕದಲ್ಲಿ ಈ ಮೊದಲೇ ನಿಗದಿಯಾಗಿರುವ ಶಸ್ತ್ರಚಿಕಿತ್ಸೆಯನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಕೇಂದ್ರ ಸಂಪನ್ಮೂಲ ಸಚಿವಾಲಯದ ಸಹಾಯಕ ಸಚಿವ ಸತ್ಯಪಾಲ್ ಸಿಂಗ್ ಸಮ್ಮೇಳನದಲ್ಲಿ ಭಾಗವಹಿಸಲು ಆಗಮಿಸುವ ಕಾರಣ ಈ ಪ್ರಕಟಣೆ ಹೊರಡಿಸಿರುವುದಾಗಿ ವಿವಿಯ ಮೂಲಗಳು ತಿಳಿಸಿವೆ. ಐಎಂಎಸ್‌ನ ಅರಿವಳಿಕೆ ಶಾಸ್ತ್ರ ವಿಭಾಗವು ಈ ನಿರ್ಧಾರ ತೆಗೆದುಕೊಂಡಿದ್ದು , ಈ ಮೂರು ದಿನ ನಿಗದಿಯಾಗಿರುವ ಶಸ್ತ್ರಚಿಕಿತ್ಸೆಯನ್ನು ಇತರ ಆಸ್ಪತ್ರೆಗೆ ವರ್ಗಾಯಿಸುವಂತೆ ಅಥವಾ ಮುಂದೂಡುವಂತೆ ಸುತ್ತೋಲೆ ಹೊರಡಿಸಿದೆ. ಆಸ್ಪತ್ರೆಯು ಎರಡನೇ ಆಯ್ಕೆಯನ್ನು ಒಪ್ಪಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

   ಆಸ್ಪತ್ರೆಯಲ್ಲಿ ಸುಮಾರು 100ಕ್ಕೂ ಹೆಚ್ಚು ರೋಗಿಗಳ ಶಸ್ತ್ರಚಿಕಿತ್ಸೆಯನ್ನು ಮುಂದೂಡಲಾಗಿದ್ದು ಇದರಲ್ಲಿ ಗಂಭೀರವಾದ ಹಾಗೂ ಗಂಭೀರ ಪ್ರಮಾಣವಲ್ಲದ ರೋಗಿಗಳೂ ಸೇರಿದ್ದಾರೆ. ಯಾವಾಗ ಶಸ್ತ್ರಚಿಕಿತ್ಸೆ ನಡೆಯಲಿದೆ ಎಂಬ ಬಗ್ಗೆ ತಮಗೆ ತಿಳಿಸಲಾಗಿಲ್ಲ ಎಂದು ರೋಗಿಗಳ ಆರೈಕೆಗೆ ಬಂದಿರುವವರು ದೂರಿದ್ದಾರೆ.

 ನಿಯಮದ ಪ್ರಕಾರ ಆಸ್ಪತ್ರೆಯ ಶೇ.50ರಷ್ಟು ಸಿಬ್ಬಂದಿ ಏಕಕಾಲಕ್ಕೆ ರಜೆ ಹಾಕಬಹುದು. ಆದರೆ ಈ ಪ್ರಕರಣದಲ್ಲಿ ವಿವಿ ನಿಯಮವನ್ನು ಉಲ್ಲಂಘಿಸಿದೆ. ಓರ್ವ ಸಚಿವರ ಭೇಟಿ ಕಾರಣಕ್ಕೆ ನೂರಾರು ಜೀವಗಳನ್ನು ಅಪಾಯಕ್ಕೆ ಒಡ್ಡುವುದು ಸರಿಯೇ ಎಂಬ ದೂರು ಕೇಳಿಬಂದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ತುರ್ತು ಚಿಕಿತ್ಸಾ ಘಟಕದ ಉಸ್ತುವಾರಿ ಪ್ರೊಫೆಸರ್ ಡಾ ಸಂಜೀವ್ ಗುಪ್ತ, ತುರ್ತು ಚಿಕಿತ್ಸಾ ಘಟಕದಲ್ಲಿ ಪೂರ್ವ ನಿಗದಿತ ರೀತಿಯಲ್ಲೇ ಶಸ್ತ್ರಚಿಕಿತ್ಸೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X