ಯಕ್ಷಾಂಗಣ ತಾಳಮದ್ದಳೆ ಸಪ್ತಾಹ: ಸಿದ್ಧತಾ ಸಭೆ

ಮಂಗಳೂರು,ಅ.27: 'ಯಕ್ಷಾಂಗಣ ಮಂಗಳೂರು' ಯಕ್ಷಗಾನ ಚಿಂತನ-ಮಂಥನ ಮತ್ತು ಪ್ರದರ್ಶನ ವೇದಿಕೆ ಹಾಗೂ ಕರ್ನಾಟಕ ಯಕ್ಷಭಾರತಿ ಪುತ್ತೂರು ಇವರ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಕಲಾಸಂಭ್ರಮವಾಗಿ ಆಯೋಜಿಸುವ ಐದನೇ ವರ್ಷದ 'ಯಕ್ಷಗಾನ ತಾಳಮದ್ದಳೆ ಸಪ್ತಾಹ'ವು 2017 ನವಂಬರ 19 ರಿಂದ 25 ರ ವರೆಗೆ ಮಂಗಳೂರು ಪುರಭವನದಲ್ಲಿ ಜರಗಲಿದೆ. ಈ ಬಗ್ಗೆ ಸಿದ್ಧತಾ ಸಭೆಯು ಯಕ್ಷಾಂಗಣದ ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಅವರ ಅಧ್ಯಕ್ಷತೆಯಲ್ಲಿ ಕದ್ರಿಕಂಬ್ಳದ ಗೃಹಕಛೇರಿಯಲ್ಲಿ ಜರಗಿತು.
ಉದ್ಯಮಿ, ಸಮಾಜಸೇವಕ ಎ.ಸದಾನಂದ ಶೆಟ್ಟಿ ಅವರ ಅಭಿನಂದನಾ ಸಮಾರಂಭ 'ಸದಾಭಿವಂದನಂ' ಮತ್ತು ಹಿರಿಯ ಅರ್ಥಧಾರಿ,ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿಯವರ 'ವಾಗರ್ಥ ಸರಣಿ 'ಜತೆಗೆ ಪ್ರತಿದಿನ ಹಿರಿಯ ಸಾಧಕರ ಸಂಸ್ಮರಣಾ ಕಾರ್ಯಕ್ರಮ ನಡೆಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಂಚಾಲಕ ರವೀಂದ್ರ ಶೆಟ್ಟಿ ಉಳಿದೊಟ್ಟು ಸ್ವಾಗತಿಸಿದರು. ಕೋಶಾಧಿಕಾರಿ ತೋನ್ಸೆ ಪುಷ್ಕಳಕುಮಾರ್ 2015-16 ನೇ ಸಾಲಿನ ಲೆಕ್ಕಪತ್ರ ಮಂಡಿಸಿದರು. ಜತೆ ಕಾರ್ಯದರ್ಶಿ ವಿಶ್ವನಾಥ ಶೆಟ್ಟಿ ತೀರ್ಥಹಳ್ಳಿ ವಂದಿಸಿದರು.





