ಸಚಿವ ಜಾರ್ಜ್ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ ಧರಣಿ

ಉಡುಪಿ, ಅ.27: ಡಿವೈಎಸ್ಪಿ ಗಣಪತಿ ನಿಗೂಢ ಸಾವಿನ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ಮೇಲೆ ಸಿಬಿಐ ಎಫ್‌ಐಆರ್ ದಾಖಲಿಸಿರುವುದರಿಂದ ಕೂಡಲೇ ರಾಜೀನಾಮೆ ನೀಡುವಂತೆ ಆಗ್ರಹಿಸಿ ಉಡುಪಿ ಬಿಜೆಪಿ ವತಿಯಿಂದ ಶುಕ್ರವಾರ ಕುಂಜಿಬೆಟ್ಟು ಬಿಜೆಪಿ ಕಚೇರಿ ಎದುರು ಧರಣಿ ನಡೆಸಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಪ್ರಕರಣದ ಆರೋಪಿಗಳು ಅಧಿಕಾರದಲ್ಲಿರುವುದರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಹೀಗಾಗಿ ಸಚಿವ ಜಾರ್ಜ್ ಕೂಡಲೇ ರಾಜೀನಾಮೆ ನೀಡಬೇಕು ಇಲ್ಲ ಮುಖ್ಯ ಮಂತ್ರಿಗಳು ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಮುಖಂಡರಾದ ಸುರೇಶ್ ನಾಯಕ್ ಕುಯಿಲಾಡಿ, ಶ್ಯಾಮಲಾ ಕುಂದರ್, ಯಶ್ಪಾಲ್ ಸುವರ್ಣ, ಗೀತಾಂಜಲಿ ಸುವರ್ಣ, ರೇಶ್ಮಾ ಉದಯ ಶೆಟ್ಟಿ, ಕಟಪಾಡಿ ಶಂಕರ ಪೂಜಾರಿ, ಆರೀಫ್ ದೊಡ್ಡಣಗುಡ್ಡೆ, ವೀಣಾ ಶೆಟ್ಟಿ, ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಕುತ್ಯಾರ್ ನವೀನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದರು.





