ವಿಷ ಪ್ರಾಶನ: ಮಗು ಸಾವು, ತಾಯಿ ಸ್ಥಿತಿ ಗಂಭೀರ
ಶಿವಮೊಗ್ಗ, ಅ. 27: ತಾಯಿಯೋರ್ವಳು ಮಗುವಿಗೆ ವಿಷವುಣಿಸಿ ತದನಂತರ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಮಗು ಮೃತಪಟ್ಟು ತಾಯಿಯ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಗೊರಗೋಡು ಗ್ರಾಮದಲ್ಲಿ ವರದಿಯಾಗಿದೆ.
ಯಶ್ವಿನಿ (2) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.
ತಾಯಿ ದಿವ್ಯಾ (28) ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಸರಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ದಿವ್ಯಾ ಅವರು ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.ಘಟನಾ ಸ್ಥಳಕ್ಕೆ ಸಬ್ ಇನ್‌ಸ್ಪೆಕ್ಟರ್ ಅಶ್ವಿನ್‌ಕುಮಾರ್ ಭೆೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





