Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಜ್‌ಯಾತ್ರಿಗಳನ್ನು ವಂಚಿಸದಿರಿ: ಖಾಸಗಿ...

ಹಜ್‌ಯಾತ್ರಿಗಳನ್ನು ವಂಚಿಸದಿರಿ: ಖಾಸಗಿ ಟೂರ್ ಆಪರೇಟರ್‌ಗಳಿಗೆ ಝಮೀರ್‌ ಅಹ್ಮದ್ ಮನವಿ

ವಾರ್ತಾಭಾರತಿವಾರ್ತಾಭಾರತಿ28 Oct 2017 7:51 PM IST
share

ಬೆಂಗಳೂರು, ಅ.28: ಬಡವರು, ಮಧ್ಯಮ ವರ್ಗದವರು ಶ್ರಮಪಟ್ಟು ತಮ್ಮ ಆದಾಯದಲ್ಲಿ ಉಳಿಸಿದ ಹಣದಲ್ಲಿ ಪವಿತ್ರ ಹಜ್ ಹಾಗೂ ಉಮ್ರಾ ಯಾತ್ರೆಗಳನ್ನು ಕೈಗೊಳ್ಳುತ್ತಾರೆ. ಅಂತಹವರನ್ನು ಯಾವುದೇ ಕಾರಣಕ್ಕೂ ವಂಚನೆ ಮಾಡಬೇಡಿ ಎಂದು ಮಾಜಿ ಸಚಿವ ಝಮೀರ್‌ ಅಹ್ಮದ್‌ಖಾನ್ ಮನವಿ ಮಾಡಿದ್ದಾರೆ.

ಶನಿವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ದೇಶದ ವಿವಿಧ ರಾಜ್ಯಗಳ ಖಾಸಗಿ ಟೂರ್ ಆಪರೇಟರ್‌ಗಳಿಗಾಗಿ ಆಯೋಜಿಸಲಾಗಿದ್ದ ‘ಮನಾಝಿಲ್ ಅಲ್ ಮುಖ್ತರಾ ಹೊಟೇಲ್ ಎಕ್ಸ್‌ಪೋ’ ಸಮಾಲೋಚನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಹಜ್, ಉಮ್ರಾ ಯಾತ್ರೆ ಕೈಗೊಳ್ಳಲು ಬಯಸುವವರು ಟೂರ್ ಆಪರೇಟರ್‌ಗಳ ಕಚೇರಿಗೆ ಬಂದಾಗ ಅವರಿಗೆ ಇಲ್ಲಸಲ್ಲದ ಆಸೆಗಳನ್ನು ತೋರಿಸಿ, ಅವರ ನಿರೀಕ್ಷೆಗಳನ್ನು ಮತ್ತಷ್ಟು ಹೆಚ್ಚಳ ಮಾಡಲಾಗುತ್ತದೆ. ಆದರೆ, ಯಾತ್ರೆಗೆ ಹೋದಾಗ ವಾಸ್ತವಿಕ ಪರಿಸ್ಥಿತಿ ತಿಳಿದು ಅವರು ಸಮಸ್ಯೆಗಳನ್ನು ಎದುರಿಸುವ ಹಲವಾರು ಉದಾಹರಣೆಗಳು ನಮ್ಮ ಮುಂದಿವೆ ಎಂದು ಹೇಳಿದರು.

ಲಾಭದ ಆಸೆಗಾಗಿ ಕೆಲವರು ಮಾಡುವ ವಂಚನೆಯಿಂದಾಗಿ, ಎಲ್ಲ ಟೂರ್ ಆಪರೇಟರ್‌ಗಳು ನಿಂದನೆಗೊಳಗಾಗುತ್ತಾರೆ. ಅಲ್ಲಾಹ್‌ನ ಪವಿತ್ರ ಮನೆಯ ದರ್ಶನವನ್ನು ಮಾಡಿಸುವ ಕಾರ್ಯ ನೀವುಗಳು ಮಾಡುತ್ತಿದ್ದೀರಾ, ಇದರಲ್ಲಿ, ಲಾಭದ ಜೊತೆಗೆ ಸೇವಾ ಮನೋಭಾವನೆಯು ಬೆಳೆಸಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದರು.

ಯಾತ್ರಿಗಳಿಗೆ ಯಾತ್ರೆಯ ಸಂದರ್ಭದಲ್ಲಿ ಒದಗಿಸಲಾಗುವ ಸೌಲಭ್ಯಗಳ ಬಗ್ಗೆ ಮೊದಲೆ ಖಚಿತ ಮಾಹಿತಿಯನ್ನು ನೀಡಿ, ಸೇವೆಗೆ ತಕ್ಕಂತೆ ಶುಲ್ಕವನ್ನು ಪಡೆಯಿರಿ. ಆದರೆ, ಹೇಳುವುದು ಒಂದು, ಮಾಡುವುದು ಮತ್ತೊಂದು ಅನ್ನುವ ರೀತಿಯಲ್ಲಿ ಯಾವುದೇ ಕಾರಣಕ್ಕೂ ವರ್ತಿಸಬೇಡಿ ಎಂದು ಕಿವಿಮಾತು ಹೇಳಿದರು.

ಮನಾಝಿಲ್ ಅಲ್ ಮುಖ್ತರಾ ಸಂಸ್ಥೆಯ ವಝೀರ್ ಪಾಷ ಬೆಂಗಳೂರಿನವರಾಗಿದ್ದು. ಮದೀನಾದಲ್ಲಿ 11 ಹೊಟೇಲ್‌ಗಳನ್ನು ಹೊಂದಿದ್ದಾರೆ. ರಾಜ್ಯ ಹಜ್ ಸಮಿತಿ ಹಾಗೂ ಖಾಸಗಿಯಾಗಿ ಹಜ್, ಉಮ್ರಾ ಯಾತ್ರೆಗೆ ತೆರಳುವ ಬಹುತೇಕ ಯಾತ್ರಿಗಳು ಇವರ ಹೊಟೇಲ್‌ನಲ್ಲೇ ವಾಸ್ತವ್ಯ ಹೂಡುತ್ತಾರೆ. ನಮ್ಮ ರಾಜ್ಯದ ಯಾತ್ರಿಗಳು ಅಲ್ಲಿ ಯಾವುದಾದರೂ ಸಮಸ್ಯೆಗಳಿಗೆ ಸಿಕ್ಕಿಹಾಕಿಕೊಂಡರೆ, ಇವರು ನೆರವು ನೀಡಲು ಸದಾ ಮುಂದಿರುತ್ತಾರೆ ಎಂದು ಹೇಳಿದರು.

ಮನಾಝಿಲ್ ಅಲ್ ಮುಖ್ತರಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಝೀರ್ ಪಾಷ ಮಾತನಾಡಿ, ಹಜ್ ಹಾಗೂ ಉಮ್ರಾ ಯಾತ್ರೆಗೆ ಯಾತ್ರಿಗಳನ್ನು ಕರೆದೊಯ್ಯುವ ವಿಚಾರದಲ್ಲಿ ಇಂದು ಖಾಸಗಿ ಟೂರ್ ಆಪರೇಟರ್‌ಗಳ ನಡುವೆ ಸ್ಪರ್ಧೆಯನ್ನು ನಾವು ಕಾಣುತ್ತಿದ್ದೇವೆ. ಆದರೆ, ಈ ಸ್ಪರ್ಧೆ ಆರೋಗ್ಯಕರವಾಗಿರಬೇಕು ಎಂದರು.

ಕೆಲವರು 30, 40 ಸಾವಿರ ರೂ.ಗಳಿಗೆ ಯಾತ್ರೆಗೆ ಕರೆದೊಯ್ಯುವುದಾಗಿ ಜಾಹೀರಾತುಗಳನ್ನು ನೀಡುತ್ತಾರೆ. ನಮ್ಮ ಸ್ಪರ್ಧೆಯ ನಡುವೆ ಯಾತ್ರಿಗಳು ಸಮಸ್ಯೆ ಎದುರಿಸಬಾರದು. ಆದುದರಿಂದ, ಎಲ್ಲ ಖಾಸಗಿ ಟೂರ್ ಆಪರೇಟರ್‌ಗಳು ಪರಸ್ಪರ ಚರ್ಚೆ ನಡೆಸಿ ಕನಿಷ್ಠ ಹಾಗೂ ಗರಿಷ್ಠ ಶುಲ್ಕವನ್ನು ನಿಗದಿ ಮಾಡುವ ಒಂದು ನಿರ್ಣಯಕ್ಕೆ ಬರುವುದು ಉತ್ತಮ ಎಂದರು.

ಮದೀನಾದಲ್ಲಿ ನಮ್ಮ ಸಂಸ್ಥೆ 11 ಹೊಟೇಲ್‌ಗಳನ್ನು ಹೊಂದಿದೆ. ಎರಡು ವೀಸಾ ಸಂಸ್ಥೆಗಳು ನಮ್ಮೆಂದಿಗೆ ಒಪ್ಪಂದ ಮಾಡಿಕೊಂಡಿವೆ. ಹೊಟೇಲ್‌ನಲ್ಲಿ ವಾಸ್ತವ್ಯ ಹೂಡುವುದು, ವಿಸಾ ಕೊಡಿಸುವುದು, ಊಟದ ವ್ಯವಸ್ಥೆ ಎಲ್ಲ ನಮ್ಮ ಮೂಲಕ ಆಗುತ್ತದೆ. ಕೇವಲ ಟಿಕೆಟ್ ಖರೀದಿ ಮಾತ್ರ ನೀವುಗಳು ಮಾಡಬೇಕು ಎಂದು ವಝೀರ್‌ಪಾಷ ತಿಳಿಸಿದರು.
ಕಾರ್ಯಕ್ರಮದಲ್ಲಿ ಅಮೀರೆ ಶರಿಅತ್ ಮೌಲಾನ ಸಗೀರ್‌ ಅಹ್ಮದ್‌ಖಾನ್ ರಶಾದಿ, ಮೌಲಾನ ಮಖ್ಸೂದ್ ಇಮ್ರಾನ್ ರಶಾದಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಉಬೇದುಲ್ಲಾ ಶರೀಫ್, ವಿಧಾನಪರಿಷತ್ ಸದಸ್ಯ ರಿಝ್ವಾನ್ ಅರ್ಶದ್, ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಬಿಬಿಎಂಪಿ ಸದಸ್ಯ ಸೈಯ್ಯದ್ ಮುಜಾಹಿದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X