Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಉನ್ನತ ಶಿಕ್ಷಣ ಇಲಾಖೆಗೆ ಪ್ರಧಾನ...

ಉನ್ನತ ಶಿಕ್ಷಣ ಇಲಾಖೆಗೆ ಪ್ರಧಾನ ಕಾರ್ಯದರ್ಶಿ ನೇಮಕಕ್ಕೆ ಮನವಿ: ರಮೇಶ್‌ ಬಾಬು

ವಾರ್ತಾಭಾರತಿವಾರ್ತಾಭಾರತಿ28 Oct 2017 8:07 PM IST
share

ಬೆಂಗಳೂರು, ಅ.28: ರಾಜ್ಯ ಸರಕಾರದ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯು ಕಳೆದ 8 ತಿಂಗಳಿನಿಂದ ಪೂರ್ಣಾವಧಿ ನೇಮಕಾತಿ ಇಲ್ಲದೆ ಖಾಲಿ ಇದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಪ್ರಭಾರ ಕಾರ್ಯದರ್ಶಿ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ರಮೇಶ್‌ಬಾಬು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿರುವ ಅವರು, ಈಗಿರುವ ಪ್ರಭಾರ ಕಾರ್ಯದರ್ಶಿಗಳು, ರಾಜ್ಯ ವಿದ್ಯುತ್ ಪ್ರಸರಣ ನಿಗಮದ ಪೂರ್ಣಾವಧಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದು ಅವರಿಗೆ ಶಿಕ್ಷಣ ಇಲಾಖೆಯ ಪ್ರಭಾರ ಹುದ್ದೆಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೆಪಿಟಿಸಿಎಲ್‌ನಲ್ಲಿ ಸುಮಾರು 70 ಸಾವಿರಕ್ಕೂ ಹೆಚ್ಚು ನೌಕರರು ಕಾರ್ಯನಿರ್ವಹಿಸುತ್ತಿದ್ದು, ರಾಜ್ಯದ ಎಲ್ಲ ವಿದ್ಯುತ್ ಸರಬರಾಜು ಕಂಪೆನಿಗಳು ಇದರ ಅಡಿಯಲ್ಲಿ ಕೆಲಸ ಮಾಡಬೇಕಿದೆ. ಕೆಪಿಟಿಸಿಎಲ್‌ನಲ್ಲಿ ಕಾರ್ಯಭಾರದ ಒತ್ತಡ ಹೆಚ್ಚು ಇರುವುದರಿಂದ ಇಲ್ಲಿನ ಪೂರ್ಣಾವಧಿಯ ಕಾರ್ಯಭಾರದ ಒತ್ತಡದ ಜೊತೆಗೆ ಉನ್ನತ ಶಿಕ್ಷಣ ಇಲಾಖೆಯ ಕಾರ್ಯವನ್ನು ನಿರ್ವಹಿಸಬೇಕಾಗಿದೆ. ಇದರಿಂದ ಉನ್ನತ ಶಿಕ್ಷಣ ಇಲಾಖೆಯ ಬಹುತೇಕ ಕಡತಗಳು ಬಾಕಿ ಇರುತ್ತವೆ ಮತ್ತು ಸಮರ್ಪಕವಾದ ಟಿಪ್ಪಣಿಗಳಿಗೆ ಒಳಪಡುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ರಾಜ್ಯದ ಆಯವ್ಯಯದಲ್ಲಿ ಸುಮಾರು ಐದು ಸಾವಿರ ಕೋಟಿ ರೂ.ಗೂ ಹೆಚ್ಚು ಹಣವನ್ನು ಉನ್ನತ ಶಿಕ್ಷಣ ಇಲಾಖೆಗೆ ನೀಡಲಾಗಿದೆ. ಇದರ ಜೊತೆಗೆ ರಾಜ್ಯದ ವಿಶ್ವವಿದ್ಯಾಲಯಗಳು ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುತ್ತದೆ. ಇಲಾಖೆಗೆ ಪೂರ್ಣಾವಧಿ ಮತ್ತು ದಕ್ಷ ಪ್ರಧಾನ ಕಾರ್ಯದರ್ಶಿ ನೇಮಕವಾದರೆ ಇಲಾಖೆಯ ಕಾರ್ಯಚಟುವಟಿಕೆಗಳು ಸುಲಲಿತವಾಗಿ ಮತ್ತು ಶೀಘ್ರವಾಗಿ ನಡೆಯುತ್ತವೆ ಎಂದು ರಮೇಶ್‌ಬಾಬು ಅಭಿಪ್ರಾಯಪಟ್ಟಿದ್ದಾರೆ.

ಇಲಾಖೆಯ ಆರ್ಥಿಕ ವಿಚಾರಗಳಿಗೆ ಸಂಬಂಧಪಟ್ಟಂತೆ ಬಹುತೇಕ ನಿರ್ಧಾರಗಳು ಟೀಕೆಗೆ ಒಳಗಾಗುತ್ತಿವೆ. ಅಲ್ಲದೇ ಪ್ರಭಾರ ಕಾರ್ಯದರ್ಶಿಗಳ ಮೂಲಕ ಆರ್ಥಿಕ ವಿಷಯಗಳ ನಿರ್ಣಯಗಳು ಅಂಗೀಕಾರವಾದರೆ ಇದರಿಂದ ರಾಜ್ಯ ಸರಕಾರದ ಹಣಕಾಸಿನ ನಷ್ಟಗಳಿಗೆ ಯಾರನ್ನೂ ಜವಾಬ್ದಾರಿ ಮಾಡಲು ಸಾಧ್ಯವಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯಲ್ಲಿ ರಾಜ್ಯ ಸರಕಾರದ ಅನುದಾನಗಳು ಮತ್ತು ಕೇಂದ್ರ ಸರಕಾರದ ಅನುದಾನಗಳು ಸೇರಿದಂತೆ ಕೋಟ್ಯಂತರ ರೂ.ಗಳು ಸಮರ್ಪಕವಾಗಿ ಬಳಕೆಯಾಗಬೇಕಾಗಿದೆ. ಆದ ಕಾರಣ, ರಾಜ್ಯ ಸರಕಾರವು ಕೂಡಲೆ ರಾಜ್ಯ ಉನ್ನತ ಶಿಕ್ಷಣ ಇಲಾಖೆಗೆ ಪೂರ್ಣಾವಧಿಯ ಪ್ರಧಾನ ಕಾರ್ಯದರ್ಶಿಯನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ರಮೇಶ್‌ಬಾಬು ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X