ಸರಗಳ್ಳತನ ಪ್ರಕರಣ: ಚಿತ್ರ ನಿರ್ಮಾಪಕ ಬಂಧನ
ಬೆಂಗಳೂರು, ಅ.28: ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪದ ಮೇಲೆ ‘ಡಬಲ್ ಮೀನಿಂಗ್’ ಚಿತ್ರದ ನಿರ್ಮಾಪಕ ಪ್ರತಾಪ್ ರಂಗು ಯಾನೆ ರಂಗ ಎಂಬಾತನನ್ನು ಇಲ್ಲಿನ ಬಸವೇಶ್ವರನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಹಲವು ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ರಂಗು ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ. ಅಲ್ಲದೆ, ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಆರೋಪಿ ರಂಗು ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮಡಕಸಿರಾದಲ್ಲಿ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ವಶಕ್ಕೆ ತೆಗೆದುಕೊಂಡು ನಗರಕ್ಕೆ ಕರೆತಂದು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





