Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ರಹ್ಮಾವರ: ನ.11ರಿಂದ13 ರಾಜ್ಯ ಪ.ಪೂ....

ಬ್ರಹ್ಮಾವರ: ನ.11ರಿಂದ13 ರಾಜ್ಯ ಪ.ಪೂ. ಕಾಲೇಜು ಕ್ರೀಡಾಕೂಟ

ವಾರ್ತಾಭಾರತಿವಾರ್ತಾಭಾರತಿ28 Oct 2017 8:18 PM IST
share
ಬ್ರಹ್ಮಾವರ: ನ.11ರಿಂದ13 ರಾಜ್ಯ ಪ.ಪೂ. ಕಾಲೇಜು ಕ್ರೀಡಾಕೂಟ

ಉಡುಪಿ, ಅ.28: ಮುಂದಿನ ನ.11ರಿಂದ 13ರವರೆಗೆ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜು ಮೈದಾನದಲ್ಲಿ ನಡೆಯುವ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟವನ್ನು ಇಡೀ ರಾಜ್ಯಕ್ಕೆ ಮಾದರಿ ಯಾಗುವಂತೆ ಆಯೋಜಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಕ್ರೀಡಾಕೂಟದ ಆಯೋಜನೆ ಕುರಿತು ರಚಿಸಲಾಗಿರುವ ವಿವಿಧ ಸಮಿತಿಗಳ ಅಧ್ಯಕ್ಷರಿಗೆ ಅಪರಜಿಲ್ಲಾಧಿಕಾರಿ ಅನುರಾಧ ಸೂಚಿಸಿದ್ದಾರೆ.

ಶನಿವಾರ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯಮಟ್ಟದ ಅಥ್ಲೆಟಿಕ್ ಕೂಟ ಆಯೋಜಿಸುವ ಕುರಿತು ನಡೆದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ರಾಜ್ಯದ ಎಲ್ಲಾ 31 ಜಿಲ್ಲೆಗಳ 62 ತಂಡಗಳ ಒಟ್ಟು 2,800ಕ್ಕೂ ಅಧಿಕ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಕ್ರೀಡಾಪಟು ಗಳಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಸಮಿತಿಗಳು ತಮಗೆ ವಹಿಸಿ ರುವ ಜವಾಬ್ದಾರಿಯನ್ನು ನಿರ್ವಹಿಸುವಂತೆ ಸೂಚಿಸಿದ ಅಪರ ಜಿಲ್ಲಾಧಿಕಾರಿ, ಕ್ರೀಡಾಕೂಟದ ಆಯೋಜನೆಗೆ ಸಂಬಂಧಿಸಿ ನೋಡಲ್ ಅಧಿಕಾರಿಯೊಬ್ಬರನ್ನು ನೇಮಿಸುವಂತೆ ತಿಳಿಸಿದರು.

ಕ್ರೀಡಾಕೂಟಕ್ಕೆ ಸೂಕ್ತ ಪೊಲೀಸ್ ಭದ್ರತೆ, ಕ್ರೀಡಾಪಟುಗಳಿಗೆ ವಸತಿ ಸೌಲ್ಯ, ಆಹಾರ ಹಾಗೂ ಸಾರಿಗೆ ಸೌಲಭ್ಯ ಒದಗಿಸುವಂತೆ ಸಲಹೆ ನೀಡಿದರು. ಕ್ರೀಡಾಕೂಟಕ್ಕೆ ಅಗತ್ಯವಿರುವ ಕ್ರೀಡಾ ಉಪಕರಣಗಳನ್ನು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪಡೆಯುವಂತೆ ಹಾಗೂ ಕ್ರೀಡಾಂಗಣದಲ್ಲಿ ಸೂಕ್ತ ವೈದ್ಯಕೀಯ ವ್ಯವಸ್ಥೆಯನ್ನು ಒದಗಿಸುವ ಕುರಿತಂತೆ ಆರೋಗ್ಯ ಇಲಾಖೆಯ ಸಹಕಾರ ಪಡೆಯುವಂತೆ ಅನುರಾಧ ತಿಳಿಸಿದರು.

ಕ್ರೀಡಾಕೂಟ ಆಯೋಜನೆ ಕುರಿತಂತೆ ಆಮಂತ್ರಣ ಪತ್ರಿಕೆ ಮುದ್ರಣದ ವೇಳೆ ಶಿಷ್ಟಾಚಾರ ವ್ಯವಸ್ಥೆಯಲ್ಲಿ ಲೋಪ ಉಂಟಾಗದಂತೆ ಕ್ರಮ ಕೈಗೊಳ್ಳುವಂತೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಈ ಹಿಂದೆ ಆಯೋಜಿಸಿದ ಎಲ್ಲಾ ಕ್ರೀಡಾಕೂಟಗಳು ಯಾವುದೇ ಲೋಪಗಳಿಲ್ಲದಂತೆ ಯಶಸ್ವಿಯಾಗಿದ್ದು, ಈ ಕ್ರೀಡಾಕೂಟವೂ ಸಹ ಯಾವುದೇ ಲೋಪವಿಲ್ಲದೇ ಅತ್ಯಂತ ಯಶಸ್ವಿಯಾಗಿ ಆಯೋಜನೆ ಮಾಡಲು ಎಲ್ಲರೂ ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಅನುರಾಧ ಕಿವಿಮಾತು ಹೇಳಿದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ವಿಜಯಲಕ್ಷ್ಮಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಸರಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ನಿಂಗಯ್ಯ, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜೋಶಿ, ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಮಧುರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಅಧಿಕಾರಿ ಮಧುಕರ್, ಒಎಸ್ ಎಜುಕೇಶನ್ ಟ್ರಸ್ಟ್‌ನ ಸಂಚಾಲಕರು ಹಾಗೂ ಧರ್ಮಗುರುಗಳಾದ ವಂ. ಸಿ.ಎ ಐಸಾಕ್, ಕಾರ್ಯದರ್ಶಿ ಅಲನ್ ರೋಹನ್ ವಾಸ್, ಸಿಬಿಎಸ್‌ಸಿ ವಿಭಾಗದ ಕಾರ್ಯದರ್ಶಿ ಅನಿಲ್ ರೋಡ್ರಿಗಸ್, ಕಾಲೇಜು ವಿಭಾಗದ ಕಾರ್ಯದರ್ಶಿ ಮಾರ್ಟಿನ್ ಡಿಸೋಜಾ, ಗೌರವಾಧ್ಯಕ್ಷ ವಸಂತ ಶೆಟ್ಟಿ, ಪ್ರಾಂಶುಪಾಲ ಐವನ್ ಡಿ ಸುವಾರಿಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X