Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಆಮ್...

ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಆಮ್ ಆದ್ಮಿ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 Oct 2017 9:25 PM IST
share

ಬೆಂಗಳೂರು, ಅ.28: ಪೊಲೀಸ್ ಅಧಿಕಾರಿ ಎಂ.ಕೆ.ಗಣಪತಿ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್‌ರನ್ನು ಆರೋಪಿ ನಂ.1 ಎಂದು ಗುರುತಿಸಿರುವ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ಸಹ ಸಂಚಾಲಕ ಮೋಹನ ದಾಸರಿ, ಹಿರಿಯ ಅಧಿಕಾರಿಗಳ ಕಿರುಕುಳ ಮತ್ತು ಸಚಿವರ ಅತೀವ ಒತ್ತಡ ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಬಿಐ ಅಧಿಕಾರಿಗಳು ಎಫ್‌ಐಆರ್‌ನಲ್ಲಿ ದಾಖಲಿಸಿದ್ದು, ಸಚಿವ ಜಾರ್ಜ್‌ರನ್ನು ಆರೋಪಿ ನಂ.1 ಎಂದು ಸೂಚಿಸಲಾಗಿದೆ. ಹೀಗಾಗಿ, ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಒಂದು ಬಾರಿ ಪೊಲೀಸ್ ಅಧಿಕಾರಿಗಳಿಂದ ತನಿಖೆ ನಡೆಸಿ ಆರೋಪದಿಂದ ಮುಕ್ತರಾಗಲು ಬಯಸಿದ್ದರು. ಅಷ್ಟೇ ಅಲ್ಲದೆ, ಮತ್ತೊಂದು ಬಾರಿ ಸಚಿವ ಸ್ಥಾನ ದಕ್ಕಿಸಿಕೊಂಡಿದ್ದರು. ಆದರೆ, ಈಗ ಆರೋಪಕ್ಕೆ ಹೊರ ತಿರುವು ಸಿಕ್ಕಿದ್ದು, ಸಿಬಿಐ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಜಾರ್ಜ್‌ರನ್ನು ರಕ್ಷಿಸಲು ಮುಂದಾಗಿದ್ದಾರೆ. ಇದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಡುತ್ತದೆ ಎಂದು ಹೇಳಿದರು.

ಸಚಿವ ಜಾರ್ಜ್‌ರನ್ನು ಸಂಪುಟದಿಂದ ವಜಾಗೊಳಿಸುವುದು ಮಾತ್ರವಲ್ಲದೆ, ಇಂತಹ ವ್ಯಕ್ತಿಗಳಿಗೆ ಮುಂಬರುವ ಚುನಾವಣೆಯಲ್ಲಿ ಹಾಗು ಅವರು ಆರೋಪ ಮುಕ್ತವಾಗುವವರೆಗೂ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಬಾರದು ಎಂದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷದ ಬ್ರಹ್ಮಾಂಡ ಭ್ರಷ್ಟಾಚಾರದಿಂದ ಬೇಸತ್ತು ಜನರು ಕಾಂಗ್ರೆಸ್‌ಗೆ ಮತ ನೀಡಿದ್ದಾರೆ. ಹೀಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮಾಡಿದ ತಪ್ಪನ್ನು ಮಾಡಬಾರದು. ಒಂದು ವೇಳೆ ಅದೇ ತಪ್ಪನ್ನು ಮಾಡಿದರೆ ಮುಂದಿನ ದಿನಗಳಲ್ಲಿ ಜನ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.

ಸಚಿವ ಕೆ.ಜೆ.ಜಾರ್ಜ್‌ರ ಕಾನೂನು ಬಾಹಿರ ಚಟುವಟಿಕೆ ವಿಷಯದಲ್ಲಿ ಗಣಪತಿಯು ಹಲವು ಮಾಹಿತಿಗಳು ಸಂಗ್ರಹ ಮಾಡಿದ್ದರು. ಅವರ ಕಂಪೆನಿಗಳ ತೆರಿಗೆ ವಿಷಯದಲ್ಲಿ ಐಎಎಸ್ ಅಧಿಕಾರಿ ಡಿ.ಕೆ.ರವಿ ತನಿಖೆಯನ್ನು ಗೃಹ ಸಚಿವರ ಅಧಿಕಾರ ಬಳಸಿ ತಡೆ ಹಿಡಿದ ಎಂಬ ಬಗ್ಗೆ ಹಲವು ಸುಳಿವುಗಳಿಗೆ. ಅವರ ಬಗ್ಗೆ ತನಿಖೆ ನಡೆಸುತ್ತಿದ್ದ ಹಿರಿಯ ಅಧಿಕಾರಿಗಳು ಸಾಕಷ್ಟು ಒತ್ತಡದಲ್ಲಿದ್ದರು ಮತ್ತು ಪ್ರಕರಣಗಳಲ್ಲಿ ಅವರ ಹೆಸರನ್ನು ದೋಷ ಮುಕ್ತಗೊಳಿಸಲು ಹಿಂದಕ್ಕೆ ಸರಿದ ಅಧಿಕಾರಿಗಳ ಜೀವವನ್ನು ತೆಗೆದರು ಎಂದ ಅವರು, ಇಂತಹ ಸಚಿವರು ರಾಜ್ಯಕ್ಕೆ ಅಗತ್ಯವಿಲ್ಲ ಎಂದು ಪ್ರತಿಪಾದಿಸಿದರು.

ಬಂಧನ ಖಂಡನೆ: ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸಚಿವ ಜಾರ್ಜ್ ಕಚೇರಿಯ ಎದುರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರೂ, ಪೊಲೀಸರು ದಬ್ಬಾಳಿಕೆ ನಡೆಸಿ ಕಾರ್ಯಕರ್ತರನ್ನು ಬಂಧನ ಮಾಡಿದ್ದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X