ಅ.31 ರಂದು ಅಸ್ಪೃಶ್ಯ ಜನಜಾಗೃತಿ ಕಾರ್ಯಕ್ರಮ
ಮಂಡ್ಯ, ಅ.28: ಕಾಂಗ್ರೆಸ್ ವಿರುದ್ಧ ಅಸ್ಪೃಶ್ಯ ಜನಜಾಗೃತಿ ಕಾರ್ಯಕ್ರಮವನ್ನು ಅ.31ರಂದು ಹಮ್ಮಿಕೊಳ್ಳಲಾಗಿದೆ ಎಂದು ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ(ಎಪಿಪಿ) ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಪಾರ್ಟಿಯ ಯುವ ಘಟಕದ ರಾಜ್ಯಾಧ್ಯಕ್ಷ ಸಿ.ಎಂ.ಕೃಷ್ಣ ತಿಳಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಮಂಡ್ಯದಲ್ಲೂ ಬೆಳಗ್ಗೆ 11ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು..
ಈ ಸಂದರ್ಭದಲ್ಲಿ ಸುಜಿತ್ ಕುಮಾರ್, ಶ್ಯಾಂ ಪ್ರಸಾದ್, ಪ್ರಭುಸ್ವಾಮಿ, ಗಂಗರಾಜು ಉಪಸ್ಥಿತರಿದ್ದರು.
Next Story





