ಗ್ರಾಮದ ಜನತೆಯ ಆರೋಗ್ಯ ಕಾಪಾಡಲು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ: ನರೇಂದ್ರರಾಜೂಗೌಡ

ಹನೂರು, ಅ.28: ಗ್ರಾಮೀಣ ಭಾಗದ ಜನತೆಯ ಆರೋಗ್ಯ ಕಾಪಾಡಲು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ ಎಂದು ಶಾಸಕ ಆರ್. ನರೇಂದ್ರರಾಜೂಗೌಡ ತಿಳಿಸಿದ್ದಾರೆ.
ತಾಲೂಕಿನ ಕಣ್ಣೂರು ಗ್ರಾಮದಲ್ಲಿ ಗ್ರಾಮೀಣಾಬಿವೃದ್ಧಿ ಮತ್ತು ಪಂಚಾಯತ್ ಇಲಾಖೆ, ಸಹಕಾರಿ ಇಲಾಖೆ, ಮತ್ತು ಕಣ್ಣೂರು ಹಾಲು ಉತ್ಪಾದಕ ಸಹಕಾರ ನಿಯಮಿತದ ವತಿಯಿಂದ ಸುಮಾರು 5 ಲಕ್ಷ ರು. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಲುಷಿತ ನೀರು ಸೇವನೆಯ ಪರಿಣಾಮದಿಂದ ವಿವಿಧ ಸಾಂಕ್ರಮಿಕ ರೋಗಗಳು ಉಲ್ಬಣಗೂಂಡು, ಪ್ರತೀ ವರ್ಷ ಲಕ್ಷಾಂತರ ಮಂದಿ ಸಾವಿಗೀಡಾಗುತ್ತಿದ್ದಾರೆ. ಇದಕ್ಕಾಗಿ ಸರಕಾರ ಜನತೆಯ ಉತ್ತಮ ಆರೋಗ್ಯವನ್ನು ಕಾಪಾಡಿಕೂಳ್ಳವ ಹಿತದೃಷ್ಟಿಯಿಂದ ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯುವ ಘಟಕ ಸ್ಥಾಪಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಚಾಮುಲ್ ಅಧ್ಯಕ್ಷ ಗುರುಮಲ್ಲಪ್ಪ, ಜಿಲ್ಲಾ ಪಂಚಾಯತ್ ಸದಸ್ಯೆ ಲೇಖಾ ರವಿಕುಮಾರ್, ತಾಲೂಕು ಪಂಚಾಯತ್ ಅಧ್ಯಕ್ಷ ರಾಜು, ಮುಖಂಡರಾದ ಕೃಷ್ಣ, ರವಿ, ಪುಟ್ಟರಾಜು, ಚಾಮುಲ್‍ನ ಉಪವ್ಯವಸ್ಥಾಪಕ ನಾಗರಾಜು, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಎನ್. ಮಹದೇವ ಸ್ವಾಮಿ, ಕಾರ್ಯದರ್ಶಿ ಮರೀಗೌಡ ಇನ್ನಿತರರು ಹಾಜರಿದ್ದರು.





