Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪೊಲೀಸರಿಂದ ಹಿರಿಯ ವಿದ್ಯಾರ್ಥಿಗಳ...

ಪೊಲೀಸರಿಂದ ಹಿರಿಯ ವಿದ್ಯಾರ್ಥಿಗಳ ವಿಚಾರಣೆ

ಮೆಡಿಕಲ್ ಕಾಲೇಜ್ ವಿದ್ಯಾರ್ಥಿಯ ಅನುಮಾನಾಸ್ಪದ ಸಾವು ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ28 Oct 2017 11:29 PM IST
share

ಶಿವಮೊಗ್ಗ, ಅ. 28: ನಗರದ ಸರಕಾರಿ ಮೆಡಿಕಲ್ ಕಾಲೇಜ್‌ನ ಎಂಬಿಬಿಎಸ್ ಪ್ರಥಮ ವರ್ಷದ ವಿದ್ಯಾರ್ಥಿ ಎಸ್.ಜಿ.ರಘು (20) ಹಾಸ್ಟೆಲ್‌ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಕಾಲೇಜ್‌ನ ಕೆಲ ಹಿರಿಯ ವಿದ್ಯಾರ್ಥಿಗಳನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ ಸ್ಪೆಕ್ಟರ್ ಹರೀಶ್ ಕೆ. ಪಾಟೀಲ್ ನೇತೃತ್ವದ ಪೊಲೀಸ್ ತಂಡವು ಕೆಲ ಹಿರಿಯ ವಿದ್ಯಾರ್ಥಿಗಳ ಜೊತೆಗೆ ಎಸ್.ಜಿ. ರಘು ಸಹಪಾಠಿಗಳಿಂದಲೂ ಮಾಹಿತಿ ಕಲೆ ಹಾಕಿದೆ. ಹಾಸ್ಟೆಲ್ ಹೊರಭಾಗದಲ್ಲಿರುವ ಸಿಸಿ ಕ್ಯಾಮರಾದ ದೃಶ್ಯಾವಳಿಗಳ ಪರಿಶೀಲನೆ ಕೂಡ ನಡೆಸಿದೆ ಎನ್ನಲಾಗಿದೆ.

ಇನ್ನೊಂದೆಡೆ ಮೃತದೇಹದ ಮರಣೋತ್ತರ ವರದಿ ಇನ್ನೂ ಪೊಲೀಸರ ಕೈಸೇರಿಲ್ಲ ಎನ್ನಲಾಗಿದ್ದು, ವೈದ್ಯಕೀಯ ವರದಿ ಬಂದ ನಂತರ ವಿದ್ಯಾರ್ಥಿಯ ಸಾವಿನ ಬಗ್ಗೆ ಮಾಹಿತಿ ಸಿಗಲಿದೆ. ಎಸ್.ಜಿ.ರಘು ಆತ್ಮಹತ್ಯೆ ಮಾಡಿಕೊಳ್ಳಲು ಹಿರಿಯ ವಿದ್ಯಾರ್ಥಿಗಳು ನೀಡುತ್ತಿದ್ದ ಕಿರುಕುಳವೇ ಮುಖ್ಯ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸಲಾರಂಭಿಸಿದ್ದಾರೆ. ಈ ಶಂಕೆಯ ಆಧಾರದ ಮೇಲೆ ಆಪಾದಿತ ಹಿರಿಯ ವಿದ್ಯಾರ್ಥಿಗಳನ್ನು ವಿಚಾರಣೆ ಗೊಳಪಡಿಸಿದ್ದು, ಕಾಲೇಜ್ ಹಾಗೂ ಹಾಸ್ಟೆಲ್‌ನಲ್ಲಿ ನಡೆಯುತ್ತಿದ್ದ ರ್ಯಾಂಗಿಂಗ್‌ಗೆ ಸಂಬಂಧಿಸಿದ ಕೆಲ ಮಹತ್ವದ ಮಾಹಿತಿಗಳು ಪೊಲೀಸರಿಗೆ ಲಭ್ಯವಾಗಿದೆ ಎಂದು ಹೇಳಲಾಗುತ್ತಿದೆ.

ಮಾಹಿತಿ ನೀಡಿರಲಿಲ್ಲ: ಮೂಲತಃ ಶಿಕಾರಿಪುರ ತಾಲೂಕು ಬೇಗೂರು ಗ್ರಾಮದ ನಿವಾಸಿಯಾದ ಎಸ್.ಜಿ.ರಘು ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ. ದೀಪಾವಳಿ ಹಬ್ಬಕ್ಕೆಂದು ಕಾಲೇಜ್‌ನಿಂದ ಊರಿಗೆ ತೆರಳಿದ್ದ. ಅ. 22ರಂದು ಕಾಲೇಜ್‌ನ ಹಾಸ್ಟೆಲ್‌ಗೆ ಹಿಂದಿರುಗಿದ್ದ. ಅಂದು ಸಂಜೆಯೇ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ವಿಷಯವನ್ನು ಪೊಲೀಸರ ಗಮನಕ್ಕೆ ತರದ ಹಿರಿಯ ವಿದ್ಯಾರ್ಥಿಗಳು, ರಘುವಿದ್ದ ಕೊಠಡಿಯ ಬಾಗಿಲು ಮುರಿದು ಆತನ ಶವವನ್ನು ಸರಕಾರಿ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಿದ್ದರು.

ಮತ್ತೊಂದೆಡೆ ಕಾಲೇಜ್ ಆಡಳಿತ ಮಂಡಳಿಯವರು ಕೂಡ ರಘು ಸಾವಿನ ಬಗ್ಗೆ ಪೋಷಕರಿಗೆ ಸಕಾಲದಲ್ಲಿ ಮಾಹಿತಿ ರವಾನಿಸಿರಲಿಲ್ಲ ಎನ್ನಲಾಗಿದ್ದು, ಇದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿತ್ತು. ಹಲವು ರೀತಿಯ ಊಹಾಪೋಹ ಗಳಿಗೂ ಕಾರಣವಾಗಿತ್ತು. ಈ ನಡುವೆ ಮೃತ ವಿದ್ಯಾರ್ಥಿಯ ತಂದೆಯೂ ಪೊಲೀಸರಿಗೆ ನೀಡಿದ ದೂರಿನಲ್ಲಿ, ತಮ್ಮ ಪುತ್ರನ ಸಾವಿನ ಬಗ್ಗೆ ಅನುಮಾನವಿದೆ. ರ್ಯಾಂಗಿಂಗ್ ಶಂಕೆ ವ್ಯಕ್ತವಾಗುತ್ತಿದೆ. ಉನ್ನತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ತಿಳಿಸಿದ್ದರು. ದೊಡ್ಡಪೇಟೆ ಠಾಣೆ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣದಡಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು.

ನಿಗೂಢ: ರಘು ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ನಿಗೂಢವಾಗಿ ಪರಿಣಮಿಸುತ್ತಿದೆ. ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ವ್ಯವಸ್ಥಿತವಾಗಿ ಪ್ರಕರಣದ ಸಾಕ್ಷ್ಯಾಧಾರಗಳನ್ನು ಮುಚ್ಚಿ ಹಾಕುವ ಹುನ್ನಾರವನ್ನು ಕೆಲವರು ನಡೆಸಿದ್ದಾರೆಂಬ ಮಾಹಿತಿ ಹರಿದಾಡುತ್ತಿದೆ. ಒಟ್ಟಾರೆ ಪೊಲೀಸರ ತನಿಖೆಯಿಂದ ಸತ್ಯಾಂಶ ಹೊರಬರಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X