ಗುಜರಾತ್‌ನಲ್ಲಿ ಬಿಜೆಪಿ ಜತೆ ಮೈತ್ರಿಯಿಲ್ಲ: ನಿತೀಶ್ ಕುಮಾರ್

ಹೊಸದಿಲ್ಲಿ, ಅ.28: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳದೆ ಸ್ವಂತ ನೆಲೆಯಲ್ಲಿ ಸ್ಪರ್ಧಿಸುವುದಾಗಿ ಜೆಡಿಯು ನಿತೀಶ್ ಕುಮಾರ್ ಬಣ ಘೋಷಿಸಿದೆ.
ಗುಜರಾತ್‌ನಲ್ಲಿ ನಮ್ಮ ಸಾಂಪ್ರದಾಯಿಕ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದೇವೆ. ಬಿಜೆಪಿಯೂ ಸೇರಿದಂತೆ ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಕೆ.ಸಿ.ತ್ಯಾಗಿ ಹೇಳಿದ್ದಾರೆ. ಈ ಹಿಂದೆ ಜೆಡಿಯು ಎನ್‌ಡಿಎ ಮೈತ್ರಿಕೂಟದಲ್ಲಿದ್ದಾಗಲೂ ಪಕ್ಷವು ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳದೆ ಚುನಾವಣೆಯಲ್ಲಿ ಸ್ಪರ್ಧಿಸಿತ್ತು ಎಂದವರು ಹೇಳಿದರು. ಗುಜರಾತ್‌ನಲ್ಲಿ ಡಿ.9 ಮತ್ತು 14ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಬಿಹಾರದಲ್ಲಿ ಆರ್‌ಜೆಡಿ ಮತ್ತು ಕಾಂಗ್ರೆಸ್ ಜತೆಗಿನ ಮಹಾಮೈತ್ರಿಯನ್ನು ಮುರಿದುಕೊಂಡಿದ್ದ ನಿತೀಶ್ ನೇತೃತ್ವದ ಜೆಡಿಯು, ಬಿಜೆಪಿ ನೇತೃತ್ವದ ಎನ್‌ಡಿಎ ಕೂಟವನ್ನು ಸೇರಿತ್ತು. ಅಲ್ಲದೆ ಬಿಹಾರದಲ್ಲಿ ಬಿಜೆಪಿ ನೆರವಿನಿಂದ ಸರಕಾರ ರಚಿಸಿತ್ತು.
Next Story





