ಪರಾರಿಯಲ್ಲಿ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರನ ದಾರುಣ ಮೃತ್ಯು
ಸಹ ಸವಾರನಿಗೆ ಗಂಭೀರ ಗಾಯ

ಮಂಗಳೂರು, ಅ.29: ರಾಷ್ಟ್ರೀಯ ಹೆದ್ದಾರಿ 169ರ ಪರಾರಿ ಎಂಬಲ್ಲಿ ಖಾಸಗಿ ಬಸ್ಸೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಚಾಲಕ ಮೃತಪಟ್ಟಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಕುಪ್ಪೆಪದವು ನಿವಾಸಿ ಗುರುಪ್ರಸಾದ್(25) ಎಂದು ಗುರುತಿಸಲಾಗಿದೆ. ಕುಪ್ಪೆಪದವು ನಿವಾಸಿ ಜಿತೇಶ್ ಸನಿಲ್ (23) ಎಂಬವರು ಗಾಯಗೊಂಡಿದ್ದಾರೆ.
ಗುರುಪ್ರಸಾದ್ ಮತ್ತು ಜಿತೇಶ್ ಸನಿಲ್ ಕುಪ್ಪೆಪದವಿನಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನ ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ಸು ಗುರುಪ್ರಸಾದ್ ಚಲಾಯಿಸುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಗುರುಪ್ರಸಾದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಹ ಸವಾರನಾಗಿ ಪ್ರಯಾಣಿಸುತ್ತಿದ್ದ ಜಿತೇಶ್ ಗಾಯಗೊಂಡಿದ್ದು, ನಗರ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





