ತುಳು ಭಾಷೆಗೆ ಮಾನ್ಯತೆ ನೀಡಲು ಪ್ರಧಾನಿಗೆ ಮನವಿ ಮಾಡಿದ ಡಾ.ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ, ಅ.29: ತುಳು ಭಾಷೆಗೆ ಮಾನ್ಯತೆ ನೀಡಲು ಕ್ರಮ ಕೈಗೊಳ್ಳುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದರು.
ಉಜಿರೆಯಲ್ಲಿ ನಡೆಯುತ್ತಿರುವ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘಗಳ ಪಾಲುದಾರರ ಬೃಹತ್ ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಡಾ.ಹೆಗ್ಗಡೆ, ನಮ್ಮ ತುಳು ಭಾಷೆಗೆ ಇನ್ನೂ ಸಂವಿಧಾನದ 8ನೆ ಪರಿಚ್ಛೇದದಲ್ಲಿ ಸ್ಥಾನ ದೊರೆತಿಲ್ಲ. ಕಳೆದ ಹಲವು ಸಮಯಗಳಿಂದ ಈ ಬಗ್ಗೆ ತುಳುನಾಡಿನ ಜನರು ಬೇಡಿಕೆಯಿಡುತ್ತಿದ್ದಾರೆ. ಈ ಬಗ್ಗೆ ದಿಲ್ಲಿಗೆ ಬಂದೂ ಮನವಿ ಸಲ್ಲಿಸಿದ್ದೇನೆ. ಆದ್ದರಿಂದ ತುಳುಭಾಷೆಗೆ ಮಾನ್ಯತೆ ನೀಡಲು ಕ್ರಮ ಕೈಗೊಳ್ಳುವಂತೆ ಪ್ರಧಾನಿಯವರಲ್ಲಿ ವಿನಂತಿಸಿದರು.
ಕಳೆದ ಮೂರು ವರ್ಷಗಳಲ್ಲಿ ದೇಶದಲ್ಲಿ ಹಲವಾರು ಬದಲಾವಣೆಗಳಾಗಿವೆ. ಅದನ್ನು ಗುರುತಿಸಲು ಸಾಧ್ಯವಾಗುತ್ತದೆ. ನೀವು ಒಂದು ಜಾಗೃತ ಭಾರತವನ್ನು ಕಟ್ಟಿದ್ದೀರಿ. ನಿಮ್ಮ ವಿಶನ್ 2025 ಹೊಸ ಬದಲಾವಣೆಗಳನ್ನು ತರುತ್ತಿದೆ ಎಂದು ಪ್ರಧಾನಿ ಮೋದಿಯವರನ್ನು ಡಾ.ವೀರೇಂದ್ರ ಹೆಗ್ಗಡೆ ಕೊಂಡಾಡಿದರು.





