Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 12 ಲಕ್ಷ ಸ್ವಸಹಾಯ ಸಂಘದ ಸದಸ್ಯರಿಗೆ ರುಪೇ...

12 ಲಕ್ಷ ಸ್ವಸಹಾಯ ಸಂಘದ ಸದಸ್ಯರಿಗೆ ರುಪೇ ಕಾರ್ಡ್ ವಿತರಿಸುವ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಚಾಲನೆ

ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ

ವಾರ್ತಾಭಾರತಿವಾರ್ತಾಭಾರತಿ29 Oct 2017 12:51 PM IST
share
12 ಲಕ್ಷ ಸ್ವಸಹಾಯ ಸಂಘದ ಸದಸ್ಯರಿಗೆ ರುಪೇ ಕಾರ್ಡ್ ವಿತರಿಸುವ  ಕಾರ್ಯಕ್ರಮಕ್ಕೆ   ಪ್ರಧಾನಿ ಮೋದಿ  ಚಾಲನೆ

ಮಂಗಳೂರು, ಅ.28: ಪ್ರಧಾನಿ ನರೇಂದ್ರ ಮೋದಿ ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೃಹತ್‌ ಕಾರ್ಯಕ್ರಮದಲ್ಲಿ ಇಂದು ಮಧ್ಯಾಹ್ನ ಪಾಲ್ಗೊಂಡು 12 ಲಕ್ಷ ಸ್ವಸಹಾಯ ಸಂಘದ ಸದಸ್ಯರಿಗೆ ರೂಪೇ ಕಾರ್ಡ್  ವಿತರಿಸುವ  ಕಾರ್ಯಕ್ರಮಕ್ಕೆ  ಚಾಲನೆ ನೀಡಿದರು. ಇಬ್ಬರು ಮಹಿಳೆಯರಿಗೆ ಸಾಂಕೇತಿಕವಾಗಿ ರುಪೇ ಕಾರ್ಡ್ ವಿತರಿಸಿದರು.

“ನಮೋ ಮಂಜುನಾಥ .... ಧರ್ಮಸ್ಥಳದ ಬಂಧು ಭಗಿನೀಯರೇ  ನಿಮಗೆಲ್ಲರಿಗೂ ನನ್ನ ನಮಸ್ಕಾರ "ಎಂದು ಕನ್ನಡದಲ್ಲಿ ಭಾಷಣ  ಆರಂಭಿಸಿದ ಪ್ರಧಾನಿ ಮೋದಿ  "ಮಂಜುನಾಥ ಸ್ವಾಮಿ  ದರ್ಶನ ಪಡೆಯುವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ "ಎಂದು ಬಣ್ಣಿಸಿದರು.

"ಕಳೆದ ವಾರ ಆಧಿಶಂಕರರು ಸ್ಥಾಪಿಸಿದ್ದ ಕೇದರನಾಥ್ ದರ್ಶನ ಪಡೆದಿದ್ದೆ. ಇಂದು ದಕ್ಷಿಣದ ಮಂಜುನಾಥನ ದರ್ಶನದ ಅವಕಾಶ ಸಿಕ್ಕಿದೆ ಎಂದು ಅಭಿಪ್ರಾಯಪಟ್ಟರು.

“ನನ್ನಂತ ಸಾಮಾನ್ಯ ವ್ಯಕ್ತಿಗೆ ನೀವು ಸನ್ಮಾನ ಮಾಡಿದ್ದೀರಿ.ನಿಮ್ಮಂತಹ ಮಹಾನ್ ತಪಸ್ವಿಯ  ಮುಂದೆ ನಾನು ಚಿಕ್ಕವನು. ನಿಮ್ಮ ಸಾಧನೆ ನಮಗೆಲ್ಲರಿಗೂ ಪ್ರೇರಣೆ ವಿಷಯ  "ಎಂದು ಡಾ.ಹೆಗ್ಗಡೆ ಅವರನ್ನು ಪ್ರಧಾನಿ ಮೋದಿ ಶ್ಲಾಘಿಸಿದರು.

"ಕೇಂದ್ರದ ಕೌಶಲ್ಯಾಭಿವದ್ಧಿ ಕಾರ್ಯಕ್ರಮಕ್ಕೆ ಹೆಗ್ಗಡೆಯವರೇ ಪ್ರೇರಣೆಯಾಗಿದ್ದಾರೆ. ಅವರ ತತ್ವವನ್ನೇ ಕೌಶಲ್ಯ ಅಭಿವೃದ್ಧಿ ಯೋಜನೆಯಲ್ಲಿ ಅಳವಡಿಸಲಾಗಿದೆ. ಅವರು ಸಣ್ಣ ವಯಸ್ಸಿನಿಂದ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ.  50 ವರ್ಷಗಳಿಂದ ಸಮಾಜದ ಹಿತಕ್ಕಾಗಿ ಕೆಲಸ ಮಾಡುವ ಅವರ ಸಾಧನೆ ದೊಡ್ಡದು" ಎಂದು ಹೇಳಿದರು.

ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಧಾನಿ ಮೋದಿಗೆ ಪೈಸೂರು ಪೇಟಾ ತೊಡಿಸಿ, ಸರಸ್ವತಿಯ ವಿಗ್ರಹ ನೀಡಿ ಸಾಂಪ್ರದಾಯಿಕವಾಗಿ ಗೌರವಿಸಿದರು.  ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು. ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಸನ್ಮಾನಿಸಿದರು.

 ಕಂಬಳದ ನೊಗದ ಮಾದರಿ ಉಡುಗೊರೆಯನ್ನು ಸಂಸದ ನಳಿನಿ ಕುಮಾರ್ ಕಟೀಲ್ ಅವರು ಪ್ರಧಾನಿ ಮೋದಿಗೆ ಸಮರ್ಪಣೆ ಮಾಡಿದರು.

ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಮತ್ತು  ಅನಂತ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ,  ಶಾಸಕ ವಸಂತ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪ್ರಾಸ್ತಾವಿಕ ಮಾತನಾಡಿದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಎಲ್.ಎಚ್.ಮಂಜುನಾಥ ಸ್ವಾಗತಿಸಿದರು. ಡಾ.ಯಶೋವರ್ಮ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X