Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ಲೂ ವೇಲ್ ಆಟದಿಂದ ಮಾನಸಿಕ...

ಬ್ಲೂ ವೇಲ್ ಆಟದಿಂದ ಮಾನಸಿಕ ಅಸ್ವಸ್ಥನಾಗಿದ್ದ ಯುವಕನ ರಕ್ಷಣೆ

'ಸ್ನೇಹಾಲಯ'ದಿಂದ ಹೆತ್ತವರ ಮಡಿಲು ಸೇರಿದ ವಾಸಿಂ

ವಾರ್ತಾಭಾರತಿವಾರ್ತಾಭಾರತಿ29 Oct 2017 4:18 PM IST
share
ಬ್ಲೂ ವೇಲ್ ಆಟದಿಂದ ಮಾನಸಿಕ ಅಸ್ವಸ್ಥನಾಗಿದ್ದ ಯುವಕನ ರಕ್ಷಣೆ

ಮಂಗಳೂರು, ಅ.29: ಬ್ಲೂವೇಲ್ ಆಟದ ಹಿಂದೆ ಬಿದ್ದು, ಮಾನಸಿಕವಾಗಿ ಅಸ್ವಸ್ಥಗೊಂಡಿದ್ದ ಯುವಕನೊಬ್ಬ ಮಂಜೇಶ್ವರ ಪಾವೂರಿನ ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನಶ್ಚೇತನ ಕೇಂದ್ರದ ನಿರ್ದೇಶಕ ಜೋಸೆಫ್ ಕ್ರಾಸ್ತಾ ಅವರ ಪ್ರಯತ್ನದಿಂದ ಹೆತ್ತವರ ಮಡಿಲು ಸೇರುವಂತಾಗಿದೆ.

ಅಸ್ಸಾಮಿನ ನಾಗೌನ್ ಜಿಲ್ಲೆಯ ಚೋಕ್‌ಟಾಪ್ ಗ್ರಾಮದ ನೂರುಲ್ ಹಕ್-ಹಲೀಮಾ ಬೇಗಮ್ ದಂಪತಿಯ ಪುತ್ರ ವಾಸಿಂ ಅಕ್ರಂ (22) ರಕ್ಷಿಸಲ್ಪಟ್ಟ ಯುವಕ.

ಸುಮಾರು 5 ತಿಂಗಳ ಹಿಂದೆ ಕೇರಳಕ್ಕೆ ಕೆಲಸ ಅರಸಿಕೊಂಡು ಬಂದಿದ್ದ ವಾಸಿಂ ಅಕ್ರಂ ಕೊಚ್ಚಿಯ ವಿಮಾನ ನಿಲ್ದಾಣ ಸಮೀಪದ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದ. 9ನೆ ತರಗತಿಯವರೆಗೆ ಕಲಿತಿದ್ದ ವಾಸಿಂ ಬ್ಲೂವೇಲ್ ಆಟಕ್ಕೆ ಮರಳಾದ. ಹಾಗೆಯೇ ಮಾನಸಿಕವಾಗಿ ಅಸ್ವಸ್ಥಗೊಂಡು ರೈಲಿನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ.

ಅಕ್ಟೋಬರ್ 2ರಂದು ಪಣಂಬೂರು ಬಳಿ ಅಲೆದಾಡುತ್ತಿದ್ದ ಈತನನ್ನು ವಶಕ್ಕೆ ತೆಗೆದುಕೊಂಡ ಇನ್‌ಸ್ಪೆಕ್ಟರ್ ರಫೀಕ್ ಮಂಜೇಶ್ವರದ ಸ್ನೇಹಾಲಯಕ್ಕೆ ಸೇರಿಸಿದ್ದರು. ಅಲ್ಲಿ ಚಿಕಿತ್ಸೆ ಪಡೆದ ವಾಸಿಂ ಗುಣಮುಖನಾದ. ಅದರಂತೆ ರವಿವಾರ ಮಧ್ಯಾಹ್ನ ವಾಸಿಂನನ್ನು ಹೆತ್ತವರಿಗೆ ಹಸ್ತಾಂತರಿಸಲಾಯಿತು.

"ನೂರುಲ್ ಹಕ್ ಮೂಲತಃ ಪಾಕಿಸ್ತಾನಿ. ಊರಲ್ಲಿ ಚಪ್ಪಲಿ ಅಂಗಡಿ ಹೊಂದಿದ್ದ ಇವರ ಪತ್ನಿ ಹಲೀಮಾ ಬೇಗಮ್ ನರ್ಸ್ ಆಗಿದ್ದಾರೆ. ಈ ದಂಪತಿಗೆ ಇಬ್ಬರು ಗಂಡು ಮತ್ತು ಒಬ್ಬ ಹೆಣ್ಣು ಮಕ್ಕಳು. ಹಿರಿಯವನಾದ ವಾಸಿಂ ಅಕ್ರಂ 9ನೆ ತರಗತಿವರೆಗೆ ಕಲಿತಿದ್ದ. ಬಳಿಕ ಕೆಲಸ ಅರಸಿಕೊಂಡು ಕೇರಳ ಕಡೆಗೆ ಬಂದಿದ್ದ. ಇತರ ಇಬ್ಬರು ಮಕ್ಕಳು ಊರಲ್ಲೇ ಶಾಲೆಗೆ ಹೋಗುತ್ತಿದ್ದಾರೆ. ಊರು ಬಿಟ್ಟು ಬಂದಿದ್ದ ವಾಸಿಂ ಬ್ಲೂವೇಲ್ ಆಟದ ಹಿಂದೆ ಬಿದ್ದಿದ್ದ. ಕೊನೆಗೆ ಆತ್ಮಹತ್ಯೆಗೆ ಯತ್ನಿಸಿ ಪಣಂಬೂರಿನಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದ. ಅ.2ರಂದು ಸ್ನೇಹಾಲಯಕ್ಕೆ ಸೇರಿಸಲ್ಪಟ್ಟ ಈತನಿಗೆ ಸಕಾಲಕ್ಕೆ ಚಿಕಿತ್ಸೆ ನೀಡಿದೆವು. ಗುಣಮುಖವಾಗುತ್ತಲೇ ಹೆತ್ತವರ ಹೆಸರು, ವಿಳಾಸ ಪತ್ತೆ ಹಚ್ಚಿ ಮಾಹಿತಿ ನೀಡಿದೆವು. ಇಂದು ಆತನ ಹೆತ್ತವರು ಇಲ್ಲಿಗೆ ಬಂದಿದ್ದು, ಮಗನನ್ನು ಸ್ವೀಕರಿಸುತ್ತಲೇ ಸಂತುಷ್ಟರಾದರು. ಅವರ ಸಂತಸದ ಕಣ್ಣೀರಿನಿಂದ ನಮ್ಮ ಸೇವೆಯು ಸಾರ್ಥಕವೆನಿಸುತ್ತಿದೆ" ಎಂದು ಸ್ನೇಹಾಲಯದ ನಿರ್ದೇಶಕ ಜೋಸೆಫ್ ಕ್ರಾಸ್ತಾ ಪ್ರತಿಕ್ರಿಯಿಸಿದ್ದಾರೆ.

ವಾಸಿಂ ಸ್ನೇಹಾಲಯ ಸೇರಿದ್ದ ಸಂದರ್ಭ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X