Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಂಎನ್‌ಎಸ್ ಮುಖಂಡನ ಮೇಲೆ ವ್ಯಾಪಾರಿಗಳಿಂದ...

ಎಂಎನ್‌ಎಸ್ ಮುಖಂಡನ ಮೇಲೆ ವ್ಯಾಪಾರಿಗಳಿಂದ ಹಲ್ಲೆ

ವಾರ್ತಾಭಾರತಿವಾರ್ತಾಭಾರತಿ29 Oct 2017 9:21 PM IST
share
ಎಂಎನ್‌ಎಸ್ ಮುಖಂಡನ ಮೇಲೆ ವ್ಯಾಪಾರಿಗಳಿಂದ ಹಲ್ಲೆ

 ಮುಂಬೈ, ಅ.29: ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್‌ಎಸ್) ಮುಖಂಡ ಸುಷಾಂತ್ ಮಲವಾಡೆ ಎಂಬವರ ಮೇಲೆ ಬೀದಿಬದಿ ವ್ಯಾಪಾರಿಗಳ ಗುಂಪೊಂದು ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.

ಮಲವಾಡೆ ನಡೆದುಕೊಂಡು ಹೋಗುತ್ತಿದ್ದಾಗ ವ್ಯಾಪಾರಿಗಳ ತಂಡವೊಂದು ಕಬ್ಬಿಣದ ರಾಡ್, ಹಾಕಿಸ್ಟಿಕ್ ಮತ್ತು ಹರಿತವಾದ ಆಯುಧದಿಂದ ಅವರ ಮೇಲೆ ದಾಳಿ ನಡೆಸಿದೆ. ಮಲವಾಡೆಯವರ ತಲೆಯ ಹಿಂಭಾಗಕ್ಕೆ ಏಟು ಬಿದ್ದಿದ್ದು ಅವರು ಸ್ಥಳದಲ್ಲೇ ಕುಸಿದುಬಿದ್ದರು ಎಂದು ಎಂಎನ್‌ಎಸ್ ಕಾರ್ಯದರ್ಶಿ ಸಚಿನ್ ಮೋರೆ ತಿಳಿಸಿದ್ದಾರೆ.

  ಈ ಘಟನೆ ಕಾಂಗ್ರೆಸ್ ಹಾಗೂ ಎಂಎನ್‌ಎಸ್ ಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ. ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವ ನಗರಪಾಲಿಕೆ ಕ್ರಮವನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಎಂಎನ್‌ಎಸ್ ಮುಖಂಡರ ವಿರುದ್ಧ ಬೀದಿಬದಿ ವ್ಯಾಪಾರಿಗಳನ್ನು ಎತ್ತಿಕಟ್ಟುತ್ತಿದ್ದಾರೆ ಎಂದು ಎಂಎನ್‌ಎಸ್ ಆರೋಪಿಸಿದೆ. ಘಟನೆಗೂ ತುಸು ಮೊದಲು ನಿರುಪಮ್, ಬೀದಿ ಬದಿ ವ್ಯಾಪಾರಿಗಳೊಂದಿಗೆ ಮಾತುಕತೆ ನಡೆಸಿದ್ದರು ಎಂದು ಎಂಎನ್‌ಎಸ್ ತಿಳಿಸಿದೆ.

ಆದರೆ ಈ ಆರೋಪವನ್ನು ನಿರುಪಮ್ ನಿರಾಕರಿಸಿದ್ದಾರೆ. ಬೀದಿ ಬದಿ ವ್ಯಾಪಾರಿಗಳ ಜೊತೆ ನಡೆದ ಮಾತುಕತೆ ಪೂರ್ವನಿಗದಿತವಾಗಿತ್ತು. ಎಂಎನ್‌ಎಸ್ ಕಾರ್ಯಕರ್ತರು ಬೀದಿಬದಿ ವ್ಯಾಪಾರಿಗಳ ಮೇಲೆ ಆಕ್ರಮಣ ನಡೆಸಿದಾಗ ಪೊಲೀಸರು ಮೂಕಪ್ರೇಕ್ಷಕರಾಗಿದ್ದರು. ಆಕ್ರಮಣ ನಡೆಸುವವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳ ದಂತೆ ಬಿಜೆಪಿ ಸರಕಾರ ಸೂಚಿಸಿದೆ. ಆದ್ದರಿಂದ ಬೀದಿಬದಿ ವ್ಯಾಪಾರಿಗಳು ತಮ್ಮನ್ನು ತಾವೇ ರಕ್ಷಿಸಿಕೊಳ್ಳುವ ಅನಿವಾರ್ಯತೆಯಿದೆ. ನಿಮ್ಮ ಮೇಲೆ ಹಲ್ಲೆ ನಡೆದರೆ ತಿರುಗೇಟು ನೀಡಿ ಎಂದು ನಾನವರಿಗೆ ಹೇಳಿದ್ದೇನೆ. ಎಂಎನ್‌ಎಸ್ ಕಾರ್ಯಕರ್ತರು ಕಾನೂನನ್ನು ಕೈಗೆತ್ತಿಕೊಳ್ಳುವುದು ಸರಿಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಮಲವಾಡೆ ಮೇಲೆ ನಡೆದ ಹಲ್ಲೆಗೆ ಪ್ರತೀಕಾರವಾಗಿ ಎಂಎನ್‌ಎಸ್ ಕಾರ್ಯಕರ್ತರು ಶನಿವಾರ ಸಂಜೆ ದಾದರ್‌ನಲ್ಲಿ ಅನಧಿಕೃತ ಬೀದಿ ಬದಿ ವ್ಯಾಪಾರಿಗಳ ಅಂಗಡಿಯ ಸಮಾಗ್ರಿಗಳನ್ನು ಸಾಮಾನುಗಳನ್ನು ಕಿತ್ತೆಸೆದು ನಾಶಗೊಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X