ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಕಾರ್ಕಳ, ಅ.29: ಅನಾರೋಗ್ಯದಿಂದ ಬಳಲುತ್ತಿದ್ದ ಕುಕ್ಕುಂದೂರಿನ ಪರಪು ನಿವಾಸಿ ಅಪ್ಪುಆಚಾರ್ಯ(50) ಎಂಬವರು ಮಾನಸಿಕವಾಗಿ ನೊಂದು ಅ.28 ರಂದು ಮನೆ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಸರ್ವೋತ್ತಮನು ಜಾಂಡಿಸ್ ಖಾಯಿಲೆಯಿಂದ ಬಳಲುತ್ತಿದ್ದ ಕೆಂಚನೂರು ಗ್ರಾಮದ ಕದ್ರಿಗುಡ್ಡೆಯ ಸರ್ವೋತ್ತಮ(26) ಎಂಬವರು ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಬಳಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





