Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚುನಾವಣೆಗಾಗಿ ಠೇವಣಿ ಹಣ ದುರ್ಬಳಕೆಗೆ...

ಚುನಾವಣೆಗಾಗಿ ಠೇವಣಿ ಹಣ ದುರ್ಬಳಕೆಗೆ ಮುಂದಾದ ರಾಜ್ಯ ಸರಕಾರ: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ30 Oct 2017 10:17 PM IST
share
ಚುನಾವಣೆಗಾಗಿ ಠೇವಣಿ ಹಣ ದುರ್ಬಳಕೆಗೆ ಮುಂದಾದ ರಾಜ್ಯ ಸರಕಾರ: ಕುಮಾರಸ್ವಾಮಿ

ಬೆಂಗಳೂರು, ಅ. 30: ವಿವಿಧ ಇಲಾಖೆಗಳ ಠೇವಣಿ ಹಣವನ್ನು ಅಕ್ರಮವಾಗಿ ನಕಲಿ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡು ಮುಂಬರುವ ಚುನಾವಣೆಗೆ ಆ ಹಣವನ್ನು ದುರ್ಬಳಕೆ ಮಾಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಮುಂದಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ  ಆರೋಪ ಮಾಡಿದ್ದಾರೆ.

ಸೋಮವಾರ ಇಲ್ಲಿನ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆಆರ್‌ಐಡಿಎಲ್) ಸಂಸ್ಥೆಯ ಒಟ್ಟು 55 ಕೋಟಿ ರೂ.ಹಣವನ್ನು ಮಂಗಳೂರಿನ ಗೋಕುಲ ನಗರದ ನವನಿಧಿ ಕಾಂಪ್ಲೆಕ್ಸ್‌ನಲ್ಲಿರುವ ಕುಳಾಯಿ ಮಂಗಳೂರು ಶಾಖೆ ಇಂಡಿಯನ್ ಓವರ್ ಸೀಸ್ ಬ್ಯಾಂಕ್‌ನಲ್ಲಿ ನಿಗದಿತ ಠೇವಣಿ ಇರಿಸಲಾಗಿತ್ತು.
ಕೆಆರ್‌ಐಡಿಎಲ್ ಇದೇ ಬ್ಯಾಂಕಿನಲ್ಲಿ ನಕಲಿ ಖಾತೆ ಸೃಷ್ಟಿಸಿದ್ದು, ಆ ಖಾತೆಯ ಮೂಲಕ ಬೇರೆ-ಬೇರೆ ಅನುತ್ಪಾದಕ ಖಾತೆಗಳಿಗೆ ವರ್ಗಾವಣೆ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ಆ ಪೈಕಿ 50 ಲಕ್ಷ ರೂ.ಗಳನ್ನು ಬೆಂಗಳೂರಿನ ಕೋರಮಂಗಲ ಶಾಖೆಯ ಶಾ ಎಕ್ಸ್‌ಪೋರ್ಟ್ಸ್ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಆದರೆ, ಈ ಖಾತೆ 2 ವರ್ಷ ವ್ಯವಹಾರವನ್ನೆ ನಡೆಸಿಲ್ಲ ಎಂದು ಅಂಕಿ-ಅಂಶಗಳನ್ನು ನೀಡಿದರು.

ಸರಕಾರದ ಹಣವನ್ನು ವೈಯಕ್ತಿಕ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡು ಅದನ್ನು ವಿಧಾನಸಭಾ ಚುನಾವಣಾ ವೆಚ್ಚಕ್ಕೆ ಬಳಸಲು ಸಿದ್ದರಾಮಯ್ಯ ನೇತೃತ್ವದ ಸರಕಾರ ಮುಂದಾಗಿದೆ. ಈ ರೀತಿ ಚುನಾವಣೆ ನಡೆಸುವ ಸಿದ್ದರಾಮಯ್ಯರವರದ್ದು ಯಾವ ರೀತಿಯ ಪಾರದರ್ಶಕ ಆಡಳಿತ ಎಂದು ಪ್ರಶ್ನಿಸಿದರು.

ರೈತರ ಸಾಲಮನ್ನಾ ಹಣವನ್ನು 6 ತಿಂಗಳಿಂದ ಬ್ಯಾಂಕ್‌ಗಳಿಗೆ ತುಂಬಲು ಇವರಿಗೆ ಸಾಧ್ಯವಾಗಿಲ್ಲ. ಚುನಾವಣಾ ವೆಚ್ಚಕ್ಕೆ ಮಾತ್ರ ಈ ರೀತಿ ಅಕ್ರಮ ವರ್ಗಾವಣೆ ಮಾಡಲಾಗುತ್ತಿದೆ. ಇದು ಒಂದು ಸಣ್ಣ ಉದಾಹರಣೆಯಷ್ಟೆ. ಈ ರೀತಿಯ ಹಲವು ಅಕ್ರಮಗಳು ಈ ಸರಕಾರದಲ್ಲಿ ನಡೆದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆ ಹಣ ಎಲ್ಲಿ: ಈ ಅಕ್ರಮದ ಬಗ್ಗೆ ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಮಾಹಿತಿ ಇದೆಯೋ ಇಲ್ಲವೋ ಗೊತ್ತಿಲ್ಲ. ಈ ಹಿಂದೆ ಬಿಜೆಪಿ ಸರಕಾರ ಇದ್ದಾಗ ಈ ರೀತಿಯ ಅಕ್ರಮ ಹಣ ವರ್ಗಾವಣೆ ಬಗ್ಗೆ ತಾನು ಪ್ರಸ್ತಾಪಿಸಿದ್ದೆ. ಆ ವೇಳೆ ಸಚಿವರು ತನಗೆ ಮಾಹಿತಿ ಕೊರತೆ ಎಂದು ಅಲ್ಲಗಳೆದಿದ್ದರು ಎಂದು ಟೀಕಿಸಿದರು.

ಮಂಡ್ಯ ನಗರಸಭೆಯಲ್ಲಿ 5ಕೋಟಿ ರೂ., ರಾಮನಗರ ಪ್ರಾಧಿಕಾರದಲ್ಲಿ 15ಕೋಟಿ ರೂ.ಹಣವನ್ನೂ ಇದೇ ರೀತಿ ಅಕ್ರಮವಾಗಿ ವರ್ಗಾಯಿಸಲಾಗಿತ್ತು. ಆ ಹಣ ಎಲ್ಲಿಗೆ ಹೋಯಿತು. ಈ ಬಗ್ಗೆ ಪತ್ತೆಹಚ್ಚುವ ಕೆಲಸ ಇದುವರೆಗೂ ಆಗಿಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಕೆಆರ್‌ಐಟಿಎಲ್‌ನಿಂದ ನಕಲಿ ಖಾತೆ ಸೃಷ್ಟಿ ಹಣ ದುರುಪಯೋಗ ಸಂಬಂಧ ಅ.27ರಂದು ನನ್ನ ಗಮನಕ್ಕೆ ಬಂದಿದ್ದು, ಅ.28ರೊಳಗೆ ವರದಿ ಸಲ್ಲಿಸಲು ಇಲಾಖೆ ಕಾರ್ಯದರ್ಶಿಗೆ ಸೂಚನೆ ನೀಡಲಾಗಿತ್ತು. ಕೆಆರ್‌ಐಡಿಎಲ್ ಸಂಸ್ಥೆ ವೀರನಗೌಡ ಪಾಟೀಲ್ ಮತ್ತು ಪ್ರಶಾಂತ್ ಮಾಡಾಳ ಭಾಗಿಯಾಗಿದ್ದಾರೆ. ಅಲ್ಲದೆ, ಮಂಗಳೂರಿನ ಇಂಡಿಯನ್ ಓವರ್‌ಸೀಸ್ ಬ್ಯಾಂಕಿನ ಮ್ಯಾನೇಜರ್ ಕೂಡ ಪಾಲ್ಗೊಂಡಿರುವ ಸಂಶಯವಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
-ಎಚ್.ಕೆ.ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X