Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಿಐಡಿ ವರದಿ ಬಿಟ್ಟು, ಪೂರಕ...

ಸಿಐಡಿ ವರದಿ ಬಿಟ್ಟು, ಪೂರಕ ದಾಖಲೆಗಳಿದ್ದರೆ ಕೊಡಿ: ಡಾ.ಮೈತ್ರಿಗೆ ಹೈಕೋರ್ಟ್ ಮೌಖಿಕ ನಿರ್ದೇಶನ

2011ರ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಹಗರಣ

ವಾರ್ತಾಭಾರತಿವಾರ್ತಾಭಾರತಿ30 Oct 2017 10:22 PM IST
share

ಬೆಂಗಳೂರು, ಅ.30: 2011ರ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಆಕ್ಷೇಪಣೆಗೆ(ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ) ಸಂಬಂಧಿಸಿದಂತೆ ಸಿಐಡಿ ವರದಿ ಬಿಟ್ಟು ಬೇರೆ ಯಾವುದಾದರೂ ಪೂರಕ ದಾಖಲೆಗಳಿದ್ದರೆ ಕೊಡಿ ಎಂದು ಡಾ.ಮೈತ್ರಿ ಅವರಿಗೆ ಹೈಕೋರ್ಟ್ ಮೌಖಿಕವಾಗಿ ನಿರ್ದೇಶಿಸಿದೆ.

2011ರ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗೆ ಕೆಪಿಎಸ್‌ಸಿ ಮೂಲಕ ಆಯ್ಕೆಯಾದ ಎಲ್ಲ 362 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು ಎಂಬ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಆದೇಶ ಪ್ರಶ್ನಿಸಿ ಅನುತ್ತೀರ್ಣ ಅಭ್ಯರ್ಥಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ಮುಂದುವರಿಸಿತು.

ಮೈತ್ರಿ ಪರ ಹಿರಿಯ ವಕೀಲ ಉದಯ ಹೊಳ್ಳ ಅವರ ವಾದವನ್ನು ಆಲಿಸಿದ ನ್ಯಾಯಪೀಠ, ಕೆಪಿಎಸ್‌ಸಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದಕ್ಕೆ ಬರಿ ಸಿಐಡಿ ವರದಿಯೊಂದನ್ನೇ ಉಲ್ಲೇಖಿಸುತ್ತೀರಲ್ಲಾ ಎಂದು ಹೊಳ್ಳ ಅವರನ್ನು ಪ್ರಶ್ನಿಸಿತು.

ಸಿಐಡಿ ವರದಿಯಲ್ಲಿ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯರಿಗೆ ಸಾವಿರಕ್ಕೂ ಹೆಚ್ಚು ಬಾರಿ ದೂರವಾಣಿ ಕರೆ ಮಾಡಿದ್ದರು ಎಂದು ಹೇಳುತ್ತೀರಿ. ಈ ಕರೆಗಳಲ್ಲಿ ಸದಸ್ಯೆ ಮಂಗಳಾ ಶ್ರೀಧರ್ ಅವರು ನಿಮ್ಮ ಅರ್ಜಿದಾರರಾದ ಡಾ.ಮೈತ್ರಿಗೆ ಕರೆ ಮಾಡಿದ್ದರೆ ಅಥವಾ ಡಾ.ಮೈತ್ರಿಯೇ ಮಂಗಳಾ ಶ್ರೀಧರ್ ಅವರಿಗೆ ಕರೆ ಮಾಡಿದ್ದರೇ ಎಂಬುದರ ವಿವರ ಕೊಡಿ ಎಂದೂ ಹೊಳ್ಳ ಅವರನ್ನು ಕೇಳಿತು.

ನನಗೆ ಕೇಸಿನ ಮೆರಿಟ್ (ಯೋಗ್ಯತೆ) ಮೇಲಿನ ವಾದ ಬೇಕಾಗಿಲ್ಲ. ಇದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ವಿಚಾರಣೆಗೆ ಅರ್ಹ ಹೌದೊ ಅಲ್ಲವೊ ಎಂಬುದನ್ನು ಮಾತ್ರವೇ ವಿಶದಪಡಿಸಿ ಎಂದು ನ್ಯಾಯಪೀಠ ಪುನುರುಚ್ಚರಿಸಿತು.

ನಿಯಮ ಪಾಲಿಸಿಲ್ಲ: ವಿಚಾರಣೆ ವೇಳೆ ಹಿರಿಯ ವಕೀಲ ಕೆ.ಜಿ.ರಾಘವನ್, ಹೊಳ್ಳ ಅವರ ವಾದಕ್ಕೆ ಪೂರಕವಾಗಿ, ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ), ಸರಕಾರಕ್ಕೆ ಕೆಪಿಎಸ್‌ಸಿ ನಿಯಮ 1997ರ 11 (1), (2) ಮತ್ತು (3)ರ ಅನುಸಾರ ನೇಮಕಾತಿ ಆದೇಶ ನೀಡಿ ಎಂದು ಹೇಳಿದೆ. ಆದರೆ, ಸರಕಾರ ನಿಯಮ 11 (1)ರ ಪ್ರಕಾರ ಕೆಪಿಎಸ್‌ಸಿ ಕಳುಹಿಸಿದ ಪಟ್ಟಿಯಲ್ಲಿರುವವರಿಗೆ ನೋಟಿಸ್ ನೀಡಿಲ್ಲ. ಅವರ ಪೂರ್ವಾಪರಗಳ ಪರಿಶೀಲನೆ ತನಿಖೆ ನಡೆಸಿಲ್ಲ ಎಂದು ಆಕ್ಷೇಪಿಸಿದರು.

ಸರಕಾರಕ್ಕೆ ಪ್ರಶ್ನೆ: ಸಿಐಡಿಯ ಮಧ್ಯಂತರ ವರದಿ ಅನುಸಾರ ಆಯ್ಕೆ ಪಟ್ಟಿ ವಾಪಸ್ ಪಡಿದಿದ್ದೀರಿ. ಆದಾದ ಮೇಲೆ ಚಾರ್ಜ್‌ಶೀಟ್ ಹಾಕಲಾಗಿದೆ ಎಂದು ಹೇಳುತ್ತೀರಿ. ಅದಾದ ಮೇಲೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಸರಕಾರದ ಪರ ವಕೀಲರನ್ನು ಪ್ರಶ್ನಿಸಿತು.
ಇದಕ್ಕೆ, ಹೆಚ್ಚುವರಿ ಅಡ್ವೊಕೇಟ್ ಜನರಲ್ ಆದಿತ್ಯ ಸೋಂಧಿ ಅವರು, ನಾಳೆ (ಅ.31) ವಿವರ ನೀವುತ್ತೇನೆ ಎಂದು ತಿಳಿಸಿದರು.

ವಿಚಾರಣೆಯನ್ನು ಅ.31ಕ್ಕೆ ಮುಂದೂಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X