Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಿರಿಯ ಯಕ್ಷಗಾನ ಕಲಾವಿದ ಶಿವರಾಮ ಜೋಗಿ...

ಹಿರಿಯ ಯಕ್ಷಗಾನ ಕಲಾವಿದ ಶಿವರಾಮ ಜೋಗಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ30 Oct 2017 10:38 PM IST
share
ಹಿರಿಯ ಯಕ್ಷಗಾನ ಕಲಾವಿದ ಶಿವರಾಮ ಜೋಗಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಬಂಟ್ವಾಳ, ಅ.30: ಹಿರಿಯ ಯಕ್ಷಗಾನ ಕಲಾವಿದ ಶಿವರಾಮ ಜೋಗಿ ಬಿ.ಸಿ.ರೋಡ್ ಅವರು 2017ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ತನ್ನ ಕಿರೀಟಕ್ಕೆರಿಸಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಜೋಗಿಯವರು ತೆಂಕುತಿಟ್ಟಿನ ಪ್ರಸಿಧ್ಧ ಮೇಳವಾದ  ಹೊಸನಗರ ಮೇಳದ ( ಈಗಿನ ಎಡನೀರು ) ಪ್ರಧಾನ ಕಲಾವಿದರಾಗಿದ್ದರು. ಯಾವುದೇ ಪಾತ್ರವನ್ನಾದರೂ ಸಮರ್ಥವಾಗಿ ನಿರ್ವಹಿಸಬಲ್ಲ ಶಿವರಾಮ ಜೋಗಿಯವರ ಅರ್ಥಗಾರಿಕೆಯೂ ಪೌಢ್ರಿಮೆಯಿಂದ ಕೂಡಿದೆ. ಉತ್ತಮ ಅಂಗಸೌಷ್ಟವ, ಕಂಚಿನ ಕಂಠ, ಶಾಸ್ತ್ರೀಯ ಹೆಜ್ಜೆಗಾರಿಕೆಯ ನಾಟ್ಯ, ಆಕರ್ಷಕ ವಾದ - ಪ್ರತಿವಾದ ಮಂಡನೆ ಎಲ್ಲವೂ ಜೋಗಿಯವರಲ್ಲಿ ಮೇಳೈಸಿದೆ.

1941ರ ಜೂ. 7ರಂದು ಕಾಂಚನ ಎಂಬ ಊರಲ್ಲಿ  ಗುರುವಪ್ಪ ಜೋಗಿ - ಸೀತಮ್ಮ ದಂಪತಿಯ ಸುಪುತ್ರರಾಗಿ ಜನಿಸಿದ ಶಿವರಾಮ ಜೋಗಿಯವರು ತಮ್ಮ 15ರ ಹರೆಯದಲ್ಲೇ ಯಕ್ಷಗಾನ ಪ್ರವೇಶಿಸಿದರು. ಅವರಿಗೀಗ 76 ವರ್ಷಪ್ರಾಯವಾಗಿದೆ.

ಸುರತ್ಕಲ್ ಮೇಳ ಒಂದರಲ್ಲೇ ನಿರಂತರ 40 ವರ್ಷಗಳ ಕಾಲ ತೊಡಗಿಸಿಕೊಂಡಿದ್ದರು. ಯೌವನದ ಕಾಲದಲ್ಲಿ ಅಭಿಮನ್ಯು, ಬಭ್ರುವಾಹನ, ಭಾರ್ಗವ ಮುಂತಾದ ಪಾತ್ರಗಳಿಂದ ಪ್ರಸಿದ್ಧರಾಗಿದ್ದರು. ವಾಲಿ, ಇಂದ್ರಜಿತು, ಕಾರ್ತ್ಯವೀರ್ಯ, ತಾಮ್ರಧ್ವಜ, ಶಿಶುಪಾಲ‌, ಹನೂಮಂತ, ಕರ್ಣ, ಭೀಷ್ಮ, ಋತುಪರ್ಣ, ಕೋಟಿ, ಕಾಂತಬಾರೆ, ದೇವುಪೂಂಜ, ವೀರಚಂದ್ರ, ಕಿರಾತ ಶ್ರೀನಿವಾಸ, ಕುಮಾರ ರಾಮ, ಬಪ್ಪಬ್ಯಾರಿ ಮುಂತಾದ ಪಾತ್ರಗಳು ಜೋಗಿಯವರಿಗೆ ಅಪಾರ ಪ್ರಸಿದ್ಧಿಯನ್ನು ತಂದುಕೊಟ್ಟಿವೆ.

ಶಂಕರನಾರಾಯಣ ಸಾಮಗ, ಶೇಣಿ  ತೆಕ್ಕಟ್ಟೆ ಆನಂದ ಮಾಸ್ತರ್, ಅಗರಿದ್ವಯ ಭಾಗವತರು, ರಾಮದಾಸ ಸಾಮಗ, ಕುಂಬ್ಳೆ,  ಕೊಳ್ಯೂರು, ಕೊಕ್ಕಡ  ಈಶ್ವರ ಭಟ್, ಪದ್ಯಾಣ ಗಣಪತಿ ಭಟ್ , ಬಾಬು ಕುಡ್ತಡ್ಕ , ಬಾಯಾರು ಪ್ರಕಾಶಚಂದ್ರ ರಾವ್ , ಕಡಬ ನಾರಾಯಣ ಆಚಾರ್ಯ ಮುಂತಾದ ಘಟಾನುಘಟಿಗಳೊಂದಿಗೆ ತಿರುಗಾಟ ನಡೆಸಿ ಅನುಭವ ಪಡೆದವರು. 'ಶಿವರಾಮ ಜೋಗಿ - ಕೊಕ್ಕಡ ಈಶ್ವರ ಭಟ್'  ಜೋಡಿ ಆ ಕಾಲದಲ್ಲಿ ಪ್ರಸಿದ್ಧಿ ಹೊಂದಿತ್ತು.

ಈ ವರ್ಷ ತಮ್ಮ ನಿರಂತರ ತಿರುಗಾಟದ 62ನೇ ವರ್ಷದ ಹೊಸ್ತಿಲಲ್ಲಿ  ಜೋಗಿಯವರಿದ್ದಾರೆ.  ಪತ್ನಿ ಲತಾ ಹಾಗೂ ಪುತ್ರಿ ಸೌಮ್ಯಾ ಹಾಗೂ ಪುತ್ರ ಸುಮಂತ್ ರಾಜ್ ರೊಂದಿಗೆ ಬಿ.ಸಿ.ರೋಡ್ ನಲ್ಲಿ ವಾಸಿಸುತ್ತಿದ್ದಾರೆ.

ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಡಾ. ಕೀಲಾರು ಪ್ರಶಸ್ತಿ, ಡಾ. ಶೇಣಿ ಪ್ರಶಸ್ತಿ, ಕುರಿಯ ಪ್ರಶಸ್ತಿ, ಕನ್ನಡ ಮತ್ತು ಸಂಸ್ಕೃತಿ ಪ್ರಶಸ್ತಿ  ಸಹಿತ ನೂರಕ್ಕೂ ಮಿಕ್ಕಿ ಪ್ರಶಸ್ತಿ ಸ್ವೀಕರಿಸಿದ ಜೋಗಿಯವರಿಗೆ ಇದೀಗ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಮುಡಿಗೇರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X