ಮಂಗಳೂರು: ದಲಿತ ಸಂಘಟನೆಯಿಂದ ಪಂಜಿನ ಮೆರವಣಿಗೆ

ಮಂಗಳೂರು, ಅ.30: ಕಾರ್ಮಿಕರನ್ನು ಮ್ಯಾನ್‌ಹೋಲ್‌ಗೆ ಇಳಿಸಿದ ಕ್ರಮವನ್ನು ಖಂಡಿಸಿ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಸ್ಥಾಪಿತ)ಯು ಸೋಮವಾರ ಸಂಜೆ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಿತು.
ನಗರದ ಪುರಭವನದ ಅಂಬೇಡ್ಕರ್ ಪ್ರತಿಮೆಯ ಮುಂಭಾಗದಿಂದ ದ.ಕ.ಜಿಲ್ಲಾಧಿಕಾರಿಗೆ ಪಂಜಿನ ಮೆರವಣಿಗೆ ನಡೆಸಿದ ದಸಂಸ ಕಾರ್ಯಕರ್ತರು ಮನಪಾ ಕಾರ್ಯವೈಖರಿಯನ್ನು ಖಂಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಸೂಕ್ತ ಕ್ರಮ ಜರಗಿಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭ ದಸಂಸ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ. ದೇವದಾಸ್, ಜಿಲ್ಲಾ ಸಂಚಾಲಕ ರಘು ಎಕ್ಕಾರು, ಸಂಘಟನೆಯ ಮುಖಂಡರಾದ ಎಂ. ಭಾಸ್ಕರ, ಹೊನ್ನಯ್ಯ ಬೆಂಜನಪದವು, ಸುರೇಶ್ ಬೆಳ್ಳಾಯಾರು, ಎಚ್.ಡಿ.ಲೋಹಿತ್, ಕೃಷ್ಣಾನಂದ ಡಿ. ಮತ್ತಿತರರು ಪಾಲ್ಗೊಂಡಿದ್ದರು.
Next Story





