ಇಂದಿರಾ ಗಾಂಧಿಗೆ ಗೌರವ ಸಲ್ಲಿಸಿದ ಪ್ರಧಾನಿ
ಹೊಸದಿಲ್ಲಿ, ಅ.31: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 33ನೆ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುಣ್ಯತಿಥಿಯ ಸಂದರ್ಭ ಅವರಿಗೆ ಗೌರವ ಸಲ್ಲಿಸುತ್ತಿದ್ದೇವೆ” ಎಂದಿದ್ದಾರೆ.
ದಿಲ್ಲಿಯ ಶಕ್ತಿ ಸ್ಥಳದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೂಡ ಇಂದಿರಾ ಗಾಂಧಿಯವರಿಗೆ ಗೌರವ ಸಲ್ಲಿಸಿದರು.
Next Story