ಕಲ್ಗುಡಿ, ಅಗ್ರಹಾರ ಸೇರಿ ಐವರಿಗೆ ‘ಡಿಸ್ ಮ್ಯಾಕ್ಸ್ ಪ್ರಶಸ್ತಿ’
ಬೆಂಗಳೂರು, ಅ.31: ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾಹಿತಿ ಡಾ.ಬಸವರಾಜ ಕಲ್ಗುಡಿ ಹಾಗೂ ಅಗ್ರಹಾರ ಕೃಷ್ಣಮೂರ್ತಿ ಸೇರಿದಂತೆ ಐದು ಜನರಿಗೆ ‘ಡಿಎಸ್‌ಮ್ಯಾಕ್ಸ್ ಸಾಹಿತ್ಯ ಶ್ರೀ’ ಪ್ರಶಸ್ತಿಯನ್ನು ನ.1 ರಂದು ಪ್ರದಾನ ಮಾಡಲಾಗುತ್ತಿದೆ.
ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ, ಕರ್ನಾಟಕ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾದ್ಯಾಪಕಿ ಡಾ.ಶಾಂತಕುಮಾರಿ ಇಮ್ರಾಪುರ, ಗುಲಬರ್ಗಾ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕಿ ಡಾ.ಜಯಶ್ರೀ ದಂಡೆಗೆ ಡಿಎಸ್ ಮ್ಯಾಕ್ಸ್ ಸಾಹಿತ್ಯ ಪ್ರಶಸ್ತಿ ಹಾಗೂ ಗುರುಲಿಂಗ ಜಂಗಮ ದೇವರ ಮಠದ ನಟರಾಜ ಮಹಾಸ್ವಾಮಿಗೆ ಡಿಎಸ್ ಮ್ಯಾಕ್ಸ್ ಸಾಹಿತ್ಯ ಪುರಸ್ಕಾರ ನೀಡಲಾಗುತ್ತಿದೆ. ಪ್ರಶಸ್ತಿಯು 15 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿದೆ.
ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇಂದು ಡಿಎಸ್ ಮ್ಯಾಕ್ಸ್ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದು, ಕಸಾಪ ಅಧ್ಯಕ್ಷ ಡಾ.ಮನುಬಳಿಗಾರ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





