ಶಾಸನ ಸಭೆಗಳಲ್ಲಿ ಶೇ.33ರಷ್ಟು ಮಹಿಳಾ ಮೀಸಲಾತಿಗೆ ಆಗ್ರಹಿಸಿ ಪ್ರಧಾನಮಂತ್ರಿಗೆ ಮನವಿ
ರಾಜ್ಯಪಾಲರ ಮೂಲಕ ಕೇಂದ್ರಕ್ಕೆ ಮನವಿ ಸಲ್ಲಿಕೆ

ಬೆಂಗಳೂರು, ಅ.31: ಕೇಂದ್ರ ಸರಕಾರವು ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿಹೆಬ್ಬಾಳ್ಕರ್ ನೇತೃತ್ವದ ನಿಯೋಗವು ರಾಜ್ಯಪಾಲರ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದೆ.
ಮಂಗಳವಾರ ರಾಜಭವನದಲ್ಲಿ ರಾಜ್ಯಪಾಲ ವಜುಭಾಯಿ ವಾಲಾರನ್ನು ಭೇಟಿ ಮಾಡಿದ ಮಹಿಳಾ ಕಾಂಗ್ರೆಸ್ ನಿಯೋಗವು 2014ರ ಲೋಕಸಭಾ ಚುನಾವಣೆಯ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಭರವಸೆ ನೀಡಿತ್ತು. ಆದರೆ, ಅಧಿಕಾರಕ್ಕೆ ಬಂದು ಮೂರು ವರ್ಷಗಳಾದರೂ ಈ ಬಗ್ಗೆ ಯಾವುದೇ ಪ್ರಯತ್ನಗಳು ನಡೆದಿಲ್ಲ ಎಂದು ರಾಜ್ಯಪಾಲರಿಗೆ ಸಲ್ಲಿಸಿದ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸುವಂತೆ ಆಗ್ರಹಿಸಿ ಕಳೆದ ಮೇ 21ರಂದು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್‌ಗಾಂಧಿ ನಾಯಕತ್ವದಲ್ಲಿ ಮಹಿಳಾ ಕಾಂಗ್ರೆಸ್ ಆಯೋಜಿಸಿದ ಸಹಿ ಸಂಗ್ರಹ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಿದೆ ಎಂದು ಲಕ್ಷ್ಮಿಹೆಬ್ಬಾಳ್ಕರ್ ತಿಳಿಸಿದ್ದಾರೆ.
ಲೋಕಸೆಯಲ್ಲಿಮಹಿಳಾಮೀಸಲಾತಿಮಸೂದೆಯನ್ನುಮಂಡಿಸುವಂತೆಆಗ್ರಹಿಸಿಕಳೆದಮೇ21ರಂದುಎಐಸಿಸಿಅ್ಯಕ್ಷೆ ಸೋನಿಯಾಗಾಂಧಿ ಹಾಗೂ ಅಭೂತಪೂರ್ವ ಬೆಂಬಲ ಸಿಕ್ಕಿದೆ ಎಂದು ಲಕ್ಷ್ಮಿಹೆಬ್ಬಾಳ್ಕರ್ ತಿಳಿಸಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಿ ಅನುಮೋದನೆ ಪಡೆದುಕೊಂಡು, ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಇದನ್ನು ಅನುಷ್ಠಾನಗೊಳಿಸಲು ಪ್ರಯತ್ನಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಿಹೆಬ್ಬಾಳ್ಕರ್, ಕಳೆದ ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ನರೇಂದ್ರಮೋದಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಭರವಸೆ ನೀಡಿದ್ದರು. ಆದರೆ, ಈವರೆಗೆ ಅದನ್ನು ಅನುಷ್ಠಾನಗೊಳಿಸುವ ಯಾವ ಪ್ರಯತ್ನಗಳು ನಡೆದಿಲ್ಲ ಎಂದರು.
ಮಹಿಳಾ ಮೀಸಲಾತಿಯ ಬಗ್ಗೆ ಅವರು ನೀಡಿದ್ದ ಭರವಸೆಯನ್ನು ನೆನಪು ಮಾಡಿ ಕೊಡಲು ರಾಜ್ಯಪಾಲರ ಮೂಲಕ ಈ ಮನವಿ ಪತ್ರವನ್ನು ಪ್ರಧಾನಿಗೆ ಕಳುಹಿಸಿ ಕೊಡಲಾಗಿದೆ ಎಂದು ಹೇಳಿದರು.
ಬೆಳಗಾವಿಯಲ್ಲಿ ಕಾಂಗ್ರೆಸ್ ಸಾಧನೆಗಳನ್ನು ಮರಾಠಿ ಭಾಷೆಯಲ್ಲಿ ಮುದ್ರಿಸಿ ಹಂಚಿದ್ದನ್ನು ಸಮರ್ಥಿಸಿಕೊಂಡ ಲಕ್ಷ್ಮಿಹೆಬ್ಬಾಳ್ಕರ್, ಈ ವಿಚಾರದಲ್ಲಿ ಕೇವಲ ನನ್ನೊಬ್ಬಳನ್ನು ವಿವಾದಕ್ಕೆ ಗಂಟು ಹಾಕಬೇಡಿ. ಬೆಳಗಾವಿ ಜಿಲ್ಲೆಯ ರಾಜಕೀಯ ಪರಿಸ್ಥಿತಿ ಭಿನ್ನವಾಗಿದೆ ಎಂದರು.
ಸುಮಾರು ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಐದು ಲಕ್ಷಕ್ಕಿಂತ ಹೆಚ್ಚು ಮರಾಠಿ ಭಾಷಿಕ ಮತದಾರರು, ಕಾರ್ಯಕರ್ತರು, ಮುಖಂಡರು ಇದ್ದಾರೆ. ಕಾಂಗ್ರೆಸ್ ಪಕ್ಷ ಹಾಗೂ ಸರಕಾರದ ಸಾಧನೆಗಳು ಅವರಿಗೆ ಗೊತ್ತಾಗಬೇಕು. ಕೇವಲ ನಮ್ಮ ಪಕ್ಷದವರಷ್ಟೇ ಅಲ್ಲ, ಬಿಜೆಪಿ ಸಂಸದ ಸುರೇಶ್ ಅಂಗಡಿ, ಶಾಸಕರಾದ ಸಂಜಯ್ ಪಾಟೀಲ್, ಶಶಿಕಲಾ ಜೊಲ್ಲೆ ಅವರು ಮರಾಠಿ ಭಾಷೆಯಲ್ಲಿ ಕರಪತ್ರಗಳನ್ನು, ಪುಸ್ತಕಗಳನ್ನು ಹಂಚಿದ್ದಾರೆ ಎಂದು ಹೇಳಿದರು.
ಜೊತೆಗೆ, ಉರ್ದು ಹಾಗೂ ಇಂಗ್ಲಿಷ್ ಭಾಷೆಯಲ್ಲೂ ಕರಪತ್ರಗಳು, ಪುಸ್ತಕಗಳನ್ನು ಹಂಚಿಕೆ ಮಾಡಲಾಗಿದೆ. ಎಂಇಎಸ್‌ನಿಂದ ಚುನಾಯಿತರಾದ ತಾಲೂಕು ಪಂಚಾಯಿತಿ ಸದಸ್ಯರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆ ತಂದ ಹೆಗ್ಗಳಿಕೆ ನನ್ನದು. ಆ ಮೂಲಕ ಅವರನ್ನು ಕನ್ನಡ ಹಾಗೂ ರಾಷ್ಟ್ರೀಯ ಪಕ್ಷದ ಜೊತೆ ಸೇರುವಂತೆ ಮಾಡಿದ್ದೇನೆ ಎಂದು ಲಕ್ಷ್ಮಿಹೆಬ್ಬಾಳ್ಕರ್ ತಿಳಿಸಿದರು.







