Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೃತ ಬಾಲಕಿಯ ಹೆಸರಿನಲ್ಲಿ ಕಲೆಕ್ಷನ್...

ಮೃತ ಬಾಲಕಿಯ ಹೆಸರಿನಲ್ಲಿ ಕಲೆಕ್ಷನ್ ಗಿಳಿದು ಸಿಕ್ಕಿಬಿದ್ದ ಭೂಪ

ಬಡ ಮಕ್ಕಳ ಚಿಕಿತ್ಸೆಗೆ ನೆರವು ನೀಡುವಾಗ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ31 Oct 2017 10:01 PM IST
share
ಮೃತ ಬಾಲಕಿಯ ಹೆಸರಿನಲ್ಲಿ ಕಲೆಕ್ಷನ್ ಗಿಳಿದು ಸಿಕ್ಕಿಬಿದ್ದ ಭೂಪ

ಪುತ್ತೂರು, ಅ. 31: ಹೆತ್ತವರು ಚಿಕಿತ್ಸೆಗೆ ನೆರವು ಯಾಚಿಸಿದ್ದ ಬಾಲಕಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಕಳೆದ ಶುಕ್ರವಾರ ಮಂಗಳೂರಿನ ಆಸ್ಪತ್ರೆಯೊಂದ ರಲ್ಲಿ ಮೃತಪಟ್ಟಿದ್ದರೂ, ಆ ಬಾಲಕಿಯ ಹೆಸರು ಹೇಳಿಕೊಂಡು ಚಿಕಿತ್ಸೆಯ ನೆರವಿನ ನೆಪದಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಿದ್ದ ವ್ಯಕ್ತಿಯೊಬ್ಬನ ವಂಚನೆ ಮಂಗಳವಾರ ಬಹಿರಂಗಗೊಂಡಿದ್ದು, ಆತನನ್ನು ಬಂಟ್ವಾಳ ತಾಲೂಕಿನ ಕಲ್ಲಡ್ಕದ ಯುವಕರು ಪತ್ತೆಹಚ್ಚಿ, ಎಚ್ಚರಿಕೆ ನೀಡಿದ ಘಟನೆ ನಡೆದಿದೆ.

ಕಡಬ ಸಮೀಪದ ಕೋಡಿಂಬಾಳ ಗ್ರಾಮದ ಕಲ್ಲಂದಡ್ಕ ಕುತ್ಯಾಡಿ ನಿವಾಸಿ ಕೂಲಿ ಕಾರ್ಮಿಕ ಇಸಾಕ್ ಎಂಬವರ ಪುತ್ರಿ ಶಹನಾಝ್ ಳ ಚಿಕಿತ್ಸೆಗೆ ಸುಮಾರು 8 ಲಕ್ಷ ಅಗತ್ಯವಿದ್ದು, ಸಹಾಯ ನೀಡುವಂತೆ ಈ ಕುಟುಂಬ ಪತ್ರಿಕೆಯ ಮೂಲಕ ಸಾರ್ವಜನಿಕರಿಗೆ ವಿನಂತಿಸಿದ್ದರು. ಬಾಲಕಿಯನ್ನು ಆ ಸಂದರ್ಭದಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶಹನಾಝ್ ಅ. 24ರಂದು ಮೃತಪಟ್ಟಿದ್ದಳು.

ಈ ಬಗ್ಗೆ ಬಾಲಕಿಯ ತಾಯಿ ಪತ್ರಕರ್ತರಿಗೆ ಮೃತಪಟ್ಟಿರುವ ಮಾಹಿತಿಯನ್ನು ನೀಡಿದ್ದು, ಈ ವರದಿಯೂ ಪ್ರಕಟವಾಗಿತ್ತು. ಆದರೆ ಅ. 25ರಂದು ಯುವಕನೋರ್ವ ಮೃತ ಬಾಲಕಿಯ ಮನೆಗೆ ಹೋಗಿ ನಿಮಗೆ ಮಂಗಳೂರಿನ ಸಂಸ್ಥೆಯೊಂದು ಹಣ ನೀಡಲಿದೆ. ಅದಕ್ಕಾಗಿ ಬಾಲಕಿಯ ಚಿಕಿತ್ಸೆಗೆ ವೈದ್ಯರು ನೀಡಿದ ದಾಖಲೆಗಳು ಹಾಗೂ ಔಷಧಿ ವೆಚ್ಚ ಇನ್ನಿತರ ದಾಖಲೆಗಳನ್ನು ನೀಡುವಂತೆ ಕೇಳಿಕೊಂಡಿದ್ದ. ಈ ಸಂದರ್ಭ ಮನೆ ಮಂದಿ ನಮ್ಮ ಮಗು ತೀರಿಕೊಂಡಿದೆ. ಇನ್ನು ನಮಗೆ ಹಣ ಬೇಡ ಎಂದರೂ ಕೇಳದೆ ಉಳಿದ ಮಕ್ಕಳಿಗೆ ಸಹಾಯವಾಗಬಹುದು ಎಂದು ಹೇಳಿ ಅವರನ್ನು ನಂಬಿಸಿ ಮಗುವಿನ ಔಷಧಿ ದಾಖಲೆಗಳನ್ನು ಪಡೆದುಕೊಂಡು ಹೋಗಿದ್ದ ಯುವಕ  ಬಾಲಕಿಯ ಚಿಕಿತ್ಸೆಯ ದಾಖಲೆಗಳನ್ನು  ಬಳಸಿಕೊಂಡು ವಂಚನೆಗಿಳಿದಿರುವುದು ನಂತರ ಬಹಿರಂಗಗೊಂಡಿತು.

ಬಾಲಕಿಯ ಚಿಕಿತ್ಸೆಗೆಂದು ಹೇಳಿಕೊಂಡು ಹಣ ಸಂಗ್ರಹ ನಡೆಸಲಾರಂಭಿಸಿದ್ದ ಈ ವಂಚಕ ಮಂಗಳವಾರ ಹಣ ಸಂಗ್ರಹಿಸಲು  ಕಲ್ಲಡ್ಕ ಪರಿಸರಕ್ಕೆ ತೆರಳಿದ್ದ ಎನ್ನಲಾಗಿದ್ದು, ಹಣ ಸಂಗ್ರಹ ನಡೆಸುತ್ತಿದ್ದ ಸಂದರ್ಭ ಬಾಲಕಿಯ ಫೋಟೊ ನೋಡಿದ ಅಲ್ಲಿನ ಸ್ಥಳೀಯ ಯುವಕರಿಗೆ  ಬಾಲಕಿ ಮೃತಪಟ್ಟಿರುವ ವಿಚಾರ ಪತ್ರಿಕೆಗಳಲ್ಲಿ ಬಂದಿರುವುದು ಅರಿತು. ಈ ಬಗ್ಗೆ ವಿಚಾರಿಸತೊಡಗಿದಾಗ ಆತ ಅಲ್ಲಿಂದ ತಪ್ಪಿಸಿಕೊಂಡು ಓಡಿ ಹೋಗಲು ಯತ್ನಿಸಿದ್ದು, ಅಲ್ಲಿನ ಯುವಕರು ಆತನನ್ನು ಬೆನ್ನಟ್ಟಿ ಹಿಡಿದು ವಿಚಾರಿಸಿದಾಗ ಆತನ ವಂಚನೆ ಬಹಿರಂಗವಾಯಿತು ಎಂದು ಯುವಕರು ತಿಳಿಸಿದ್ದಾರೆ.

ತಾನು ಮೃತ ಬಾಲಕಿಯ ಮನೆಗೆ ತೆರಳಿ ಚಿಕಿತ್ಸೆಯ ದಾಖಲೆಗಳನ್ನು ಸಂಗ್ರಹಿಸಿ ಆಕೆಯ ಹೆಸರು ಹೇಳಿ ಹಣ ಸಂಗ್ರಹ ಮಾಡುತ್ತಿರುವುದನ್ನು ವಂಚಕ ಒಪ್ಪಿ ಕೊಂಡಿದ್ದು, ಸ್ಥಳೀಯ ಯುವಕರು ಆತನಲ್ಲಿದ್ದ ಎಲ್ಲಾ ದಾಖಲೆಗಳನ್ನುಪಡೆದುಕೊಂಡು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X