Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "ನಾನೇಕೆ ರಾಜ್ಯೋತ್ಸವ ಪ್ರಶಸ್ತಿಯನ್ನು...

"ನಾನೇಕೆ ರಾಜ್ಯೋತ್ಸವ ಪ್ರಶಸ್ತಿಯನ್ನು ಸ್ವೀಕರಿಸುತ್ತಿಲ್ಲ"

ಸಾಹಿತಿ ಡಿ.ಎಸ್. ನಾಗಭೂಷಣ

ವಾರ್ತಾಭಾರತಿವಾರ್ತಾಭಾರತಿ31 Oct 2017 10:06 PM IST
share
ನಾನೇಕೆ ರಾಜ್ಯೋತ್ಸವ ಪ್ರಶಸ್ತಿಯನ್ನು ಸ್ವೀಕರಿಸುತ್ತಿಲ್ಲ

ಶಿವಮೊಗ್ಗ, ಅ.31: ರಾಜ್ಯ ಸರಕಾರ ಈಗಾಗಲೇ 2017ನೆ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಿದ್ದು, ವಿವಿಧ ಕ್ಷೇತ್ರಗಳ 62 ಸಾಧಕರು ಈ ಪಟ್ಟಿಯಲ್ಲಿದ್ದಾರೆ. ಆದರೆ ಸಾಹಿತಿ ಡಿ.ಎಸ್. ನಾಗಭೂಷಣ ಅವರು ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ತಾನು ಪ್ರಶಸ್ತಿಯನ್ನು ಏಕೆ ಸ್ವೀಕರಿಸುತ್ತಿಲ್ಲ ಎನ್ನುವ ವಿಚಾರದಲ್ಲಿ ಸಾಹಿತಿ ಡಿ.ಎಸ್. ನಾಗಭೂಷಣ ಅವರ ಪ್ರಕಟನೆ ಈ ಕೆಳಗಿನಂತಿದೆ.

"ನಾನು ನನ್ನ ಕರ್ತವ್ಯವೆಂದು ಭಾವಿಸಿ ಮಾಡಿದ ನಾಡು-ನುಡಿಗಳ ಅಲ್ಪ ಸೇವೆಯನ್ನು ಮಾನ್ಯ ಮಾಡಿ ಘನ ಕರ್ನಾಟಕ ಸರ್ಕಾರವು ನನಗೆ ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿ ನೀಡಲು ನಿರ್ಧರಿಸುವುದಕ್ಕಾಗಿ ಸರ್ಕಾರಕ್ಕೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಬಯಸುತ್ತೇನೆ. ನಾಡು-ನುಡಿಗಳಿಗೆ ಸೇವೆ ಸಲ್ಲಿಸಿದವರನ್ನು ಗುರುತಿಸಿ ಪ್ರಶಸ್ತಿಯ ಮಾನ್ಯತೆಯನ್ನು ನೀಡುವುದು ಕೂಡ ನಾಡು-ನುಡಿಗಳಿಗೆ ಸಲ್ಲಿಸುವ ಸೇವೆಯೇ ಆಗಿದೆ. ಆದರೆ ನನಗೆ ನೀಡಲಾಗಿರುವ ಈ ಪ್ರಶಸ್ತಿಯನ್ನು ನಾನು ಸ್ವೀಕರಿಸಲು ಇಂದಿನ ಸಂದರ್ಭದಲ್ಲಿ ನನಗೆ ಮನಸ್ಸಾಗುತ್ತಿಲ್ಲವೆಂಬುದನ್ನೂ ಈ ಮೂಲಕ ತಿಳಿಸಬಯಸುವೆ. ಇದಕ್ಕೆ ಕಾರಣಗಳು ಹೀಗಿವೆ"..

"ರಾಜ್ಯೋತ್ಸವವೆಂಬುದು ನಮ್ಮ ಕನ್ನಡ ರಾಜ್ಯೋದಯದ ಸಂಭ್ರಮದ ಆಚರಣೆಯೇ ಆಗಿದೆ. ಈ ರಾಜ್ಯೋದಯಕ್ಕೆ ಕಾರಣವಾದ ಕರ್ನಾಟಕ ಏಕೀಕರಣ ಆಂದೋಲನದ ಕೇಂದ್ರ ಕಾಳಜಿಯಾಗಿದ್ದುದು, ಕರ್ನಾಟಕದ ಮಕ್ಕಳು ಕನ್ನಡವನ್ನು ತಮ್ಮ ಬದುಕಿನ ಭಾಷೆಯಾಗಿ ಬಳಸಿ ಬೆಳೆಸಬೇಕೆಂಬುದು. ಇದನ್ನು ಸಾಧ್ಯಮಾಡುವ ಏಕೈಕ ಮಾರ್ಗವೆಂದರೆ, ಕನ್ನಡವು ಶಿಕ್ಷಣದ ಮಾಧ್ಯಮವಾಗುವುದು. ಆದರೆ ಪ್ರಾಥಮಿಕ ಶಾಲಾ ಶಿಕ್ಷಣದ ಹಂತದವರೆಗಾದರೂ ಕರ್ನಾಟಕದ ಮಕ್ಕಳಿಗೆ ಶಿಕ್ಷಣ ಮಾಧ್ಯಮವು ಕನ್ನಡವಾಗಿರಬೇಕೆಂಬ ಕರ್ನಾಟಕದ ಜನತೆಯ ಪ್ರತಿನಿಧಿಯಾದ ಕರ್ನಾಟಕ ಸರ್ಕಾರದ ಸಂಕಲ್ಪ ಇನ್ನೂ ಈಡೇರಿಲ್ಲ. ಅದರ ಎರಡು ದಶಕಗಳ ನ್ಯಾಯಾಂಗ ಹೋರಾಟವೂ ವಿಫಲವಾಗಿದೆ. ಇದಕ್ಕೆ ಕಾರಣ ನಮ್ಮ ರಾಷ್ಟ್ರ ಕಲ್ಪನೆಯ ಪ್ರಣಾಳಿಕೆಯಂತಿರುವ ನಮ್ಮ ಸಂವಿಧಾನವೇ ಅದಕ್ಕೆ ವಿರೋಧವಾಗಿರುವುದು. ರಾಷ್ಟ್ರ ಕಲ್ಪನೆಯಲ್ಲಿನ ಈ ಸಾಂವಿಧಾನಿಕ ವಿರೋಧಾಭಾಸವನ್ನು ಸರಿಪಡಿಸಿ ನಮ್ಮ ರಾಷ್ಟ್ರದ ಸಾಂಸ್ಕೃತಿಕ ಅಸ್ತಿತ್ವದ ಮೂಲಾಧಾರವಾದ ಜನಸಮುದಾಯಗಳ ಭಾಷೆಗಳ ಪ್ರಾಧಾನ್ಯತೆಯನ್ನು ರಾಷ್ಟ್ರದ ಬದುಕಿನಲ್ಲಿ ಮರುಸ್ಥಾಪಿಸಬೇಕಾದದ್ದು ಜನತೆಯ ಪ್ರತಿನಿಧಿಯಾದ ಸರ್ಕಾರದ ಕರ್ತವ್ಯ".

"ಆದರೆ ಕರ್ನಾಟಕ ಸರ್ಕಾರವು ಪ್ರಾಥಮಿಕ ಶಾಲಾ ಶಿಕ್ಷಣವನ್ನು ಕನ್ನಡದಲ್ಲೇ ಒದಗಿಸುವ ತನ್ನ ಸಂಕಲ್ಪಕ್ಕೆ ಸಂವಿಧಾನವೇ ಅಡ್ಡಿಯಾಗಿದೆ ಎಂಬುದನ್ನು ಈ ಸಂಬಂಧದ ನಮ್ಮ ಸರ್ವೋನ್ನತ ನ್ಯಾಯಾಲಯದ ತೀರ್ಪಿನಿಂದ ಮೂರು ವರ್ಷಗಳ ಹಿಂದೆಯೇ ಕಂಡುಕೊಂಡಿದ್ದರೂ, ಇದನ್ನು ಸರಿಪಡಿಸುವ ಯಾವ ಕ್ರಮವನ್ನೂ ಈವರೆಗೆ ಕೈಗೊಳ್ಳದಿರುವುದು ದುರದೃಷ್ಟಕರ. ಕಳೆದ ವರ್ಷದ ರಾಜ್ಯೋತ್ಸವ ಸಂದರ್ಭದ ಒಂದು ಭಾಷಣದಲ್ಲಿ ನಮ್ಮ ಮುಖ್ಯಮಂತ್ರಿಗಳು ಈ ಸಂಬಂಧವಾದ ಸಂವಿಧಾನ ತಿದ್ದುಪಡಿ ಮಾಡಬೇಕೆಂದು ಪ್ರಧಾನ ಮಂತ್ರಿಯವರನ್ನು ಆಗ್ರಹಿಸಿದ್ದನ್ನು ಬಿಟ್ಟರೆ ತಮ್ಮ ಸರ್ಕಾರದ ಕಡೆಯಿಂದ ಯಾವ ಕ್ರಮವನ್ನೂ ಕೈಗೊಂಡ ಸೂಚನೆಗಳಿಲ್ಲ. ಬದಲಿಗೆ ಸರ್ಕಾರವು ಈ ಇಡೀ ವಿಷಯವನ್ನು ಮುಗಿದ ಅಧ್ಯಾಯವೆಂದು ಕೈಚೆಲ್ಲಿ, ಈ ಸಂಬಂಧದ ಈವರೆಗಿನ ಹೋರಾಟವನ್ನು ಇತಿಹಾಸಕ್ಕೆ ಸರಿಸುವ ಪ್ರಯತ್ನ ಮಾಡುತ್ತಿರುವಂತಿದೆ. ಇದರ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಸಂಖ್ಯೆ ಒಂದೇ ಸಮನೆ ಇಳಿಮುಖವಾಗುತ್ತಿದೆ. ರಾಜ್ಯೋತ್ಸವದ ಸಂದರ್ಭದಲ್ಲಿಯಾದರೂ ಈ ದುರಂತಮಯ ಬೆಳವಣಿಗೆಯ ಅಂತಿಮ ಪರಿಣಾಮವಾದರೂ ಏನಾಗಬಹುದು ಎಂಬುದನ್ನು ಯೋಚಿಸಿ ಇದಕ್ಕೆ ಪರಿಹಾರ ಹುಡುಕುವ ಪ್ರಯತ್ನದ ಬಗ್ಗೆ ಗಂಭೀರವಾಗಿ ಆಲೋಚಿಸಬೇಕಿದೆ". 

"ಶಿಕ್ಷಣ ಮಾಧ್ಯಮದ ಸಂಬಂಧವಾಗಿ ಸರ್ವೋನ್ನತ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದು ಕರ್ನಾಟಕ ಸರ್ಕಾರವೇ ಆದುದರಿಂದ, ಈಗ ಅದಕ್ಕೆ ತಡೆಯಾಗಿರುವ ಸಂವಿಧಾನಕ್ಕೆ ಅಗತ್ಯ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಬೇಕಾದುದೂ ಕರ್ನಾಟಕ ಸರ್ಕಾರದ ಹೊಣೆಯೇ ಆಗಿದೆ. ಆದರೆ ಮೂರು ವರ್ಷಗಳಾದರೂ ಇದಕ್ಕಾಗಿ ಮೀನ-ಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರದ ಮನೋಭಾವದ ಬಗೆಗಿನ ನನ್ನ ತೀವ್ರ ಅಸಮಾಧಾನ ಸೂಚಿಸಲು ನಾನು ಅದು ನೀಡುತ್ತಿರುವ ಈ ರಾಜ್ಯೋತ್ಸವ ಪ್ರಶಸ್ತಿಯನ್ನು ಸ್ವೀಕರಿಸದಿರಲು ನಿರ್ಧರಿಸಿದ್ದೇನೆ".

"ಈಗಲಾದರೂ ನಮ್ಮ ರಾಜ್ಯ ಸರ್ಕಾರವು, ಅಗತ್ಯ ಕಂಡುಬಂದರೆ ಸಮಾನ ಮನಸ್ಕ ಇತರ ರಾಜ್ಯ ಸರ್ಕಾರಗಳ ಮುಖ್ಯಸ್ಥರೊಂದಿಗೆ ಸಮಾಲೋಚಿಸಿ, ರಾಜ್ಯಗಳ ಭಾಷೆಗಳನ್ನು ಆಯಾ ರಾಜ್ಯಗಳಲ್ಲಿನ ಪ್ರಾಥಮಿಕ ಶಿಕ್ಷಣದ ಮಾಧ್ಯಮವನ್ನಾಗಿ ಮಾಡುವುದಕ್ಕೆ ಅಡ್ಡಿಯಾಗಿರುವ ಸಂವಿಧಾನದ ವಿಧಿಗಳಿಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಯತ್ನಗಳನ್ನು ಆರಂಭಿಸುವಂತೆ ಕೋರುತ್ತೇನೆ. ಇದರಿಂದಾಗಿ ರಾಜ್ಯದ ಎಲ್ಲ ಪಠ್ಯಕ್ರಮಗಳ ಮತ್ತು ಎಲ್ಲ ಮಾದರಿಗಳ ಶಾಲೆಗಳಲ್ಲೂ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸಬೇಕೆಂದು ಆದೇಶಿಸುವ ರಾಜ್ಯ ಸರ್ಕಾರದ ಇತ್ತೀಚಿನ ಆಜ್ಞೆಗಳಿಗೂ ಸಾಂವಿಧಾನಿಕ ಬಲ ಬಂದಂತಾಗುತ್ತದೆ. ಇಲ್ಲದೆ ಹೋದರೆ ಈ ಆಜ್ಞೆಗಳೂ ಶಿಕ್ಷಣ ಮಾಧ್ಯಮದ ಆಜ್ಞೆಯಂತೆಯೇ ನ್ಯಾಯಾಂಗದಿಂದ ಅಸಿಂಧು ಎನಿಸಿಕೊಳ್ಳುವ ಎಲ್ಲ ಸಾಧ್ಯತೆಗಳಿವೆ".

-ಡಿ.ಎಸ್. ನಾಗಭೂಷಣ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X