ಎಚ್.ಡಿ.ಕೋಟೆ ಶಾಸಕ ಚಿಕ್ಕಮಾದು ಆರೋಗ್ಯ ಗಂಭೀರ
ಮೈಸೂರು, ಅ.31: ಎಚ್.ಡಿ.ಕೋಟೆ ವಿಧಾನ ಸಭಾ ಕ್ಷೇತ್ರದ ಜಾ.ದಳ ಶಾಸಕ ಚಿಕ್ಕಮಾದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಅರವಿಂದ ಆಸ್ಪತ್ರೆಯ ತೀವ್ರಾನಿಗಾ ಘಟಕದಲ್ಲಿ ಇರಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಬಹು ಅಂಗಾಂ ವೈಫಲ್ಯದಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಸಿಗ್ಮಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದರು.
ಶುಕ್ರವಾರ ಮಧ್ಯಾಹ್ನ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದರಿಂದ ತಕ್ಷಣ ಅವರನ್ನು ಅವರವಿಂದ ಆಸ್ಪತ್ರೆಗೆ ದಾಖಲು ಮಾಡಲಾಯಿತು.
ಸದ್ಯ ಕೃತಕ ಉಸಿರಾಟ ವ್ಯವಸ್ಥೆಯಡಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದು ಬಂದಿದೆ.
Next Story





