ರಾಹುಲ್ ಗಾಂಧಿಯನ್ನು ಭೇಟಿಯಾಗಿಲ್ಲ: ಮೇವಾನಿ

ಅಹ್ಮದಾಬಾದ್, ಅ. 31: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಮಂಗಳವಾರ ಭೇಟಿಯಾಗಿರುವುದು ಸುಳ್ಳು ವರದಿ ಎಂದು ಗುಜರಾತ್‌ನ ದಲಿತ ನಾಯಕ ಜಿಗ್ನೇಶ್ ಮೇವಾನಿ ಹೇಳಿದ್ದಾರೆ.
ತಾನು ರಾಹುಲ್ ಗಾಂಧಿ ಅವರನ್ನು ಭೇಟಿಯಾದರೆ, ದಲಿತ ಸಮುದಾಯದ ಸಮಸ್ಯೆಗಳ ಬಗ್ಗೆ ಕಾಂಗ್ರೆಸ್‌ನ ನಿಲುವು ಏನು ಎಂಬುದನ್ನು ತಿಳಿಯಲಿದ್ದೇನೆ. ಭೇಟಿಯನ್ನು ವೈಯಕ್ತಿಕ ಲಾಭಕ್ಕೆ ಬಳಸಿಕೊಳ್ಳಲಾರೆ ಎಂದು ಅವರು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರೊಂದಿಗೆ ಭೇಟಿ ಸಾಧ್ಯತೆ ಬಗ್ಗೆ ವದಂತಿ ಹರಡಿರುವ ನಡುವೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಶೇರ್ ಮಾಡಿರುವ ಮೇವಾನಿ, ತಾನು ಇಂದು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದೇನೆ ಎಂಬ ಸುಳ್ಳು ಸುದ್ದಿಯನ್ನು ದಯವಿಟ್ಟು ಶೇರ್ ಮಾಡಬೇಡಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿಸುತ್ತೇನೆ ಎಂದಿದ್ದಾರೆ. ರಾಜ್ಯದಲ್ಲಿ ಬುಧವಾರದಿಂದ ಆರಂಭವಾಗಲಿರುವ ಮೂರು ದಿನಗಳ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಹಾಗೂ ಮೇವಾನಿ ಭೇಟಿ ಬಗ್ಗೆ ಇದುವರೆಗೆ ಯೋಜಿಸಿಲ್ಲ ಎಂದು ಕಾಂಗ್ರೆಸ್ ಹೇಳಿದೆ.
Next Story





