ಕರ್ನಾಟಕ ಮುಕ್ತ ವಿವಿ ಪುನಾರಂಭಕ್ಕೆ ಸಿಎಫ್ ಐ ಆಗ್ರಹ

ಶಿವಮೊಗ್ಗ, ಅ. 31: ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯಕ್ಕೆ ಮಾನ್ಯತೆ ಕಲ್ಪಿಸಿ, ಪುನರ್ ಆರಂಭಕ್ಕೆ ಕೇಂದ್ರ ಸರಕಾರ ಕ್ರಮಕೈಗೊಳ್ಳಬೇಕು. ವಿಶ್ವವಿದ್ಯಾನಿಲಯದ ಮಾನ್ಯತೆ ರದ್ದಿಗೆ ಕಾರಣರಾದವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಕೇಂದ್ರ-ರಾಜ್ಯ ಸರಕಾರಗಳಿಗೆ ಮನವಿ ಸಲ್ಲಿಸಲಾಯಿತು.
ಯುಜಿಸಿಯ ಈ ನಿರ್ಧಾರದಿಂದ ಲಕ್ಷಾಂತರ ವಿದ್ಯಾರ್ಥಿಗಳು ಅತಂತ್ರಕ್ಕೆ ಸಿಲುಕಿದ್ದಾರೆ. ಮುಕ್ತ ವಿವಿ ಮಾಡಿದ ತಪ್ಪಿಗೆ ವಿದ್ಯಾರ್ಥಿಗಳು ಬಲಿಪಶುವಾಗುತ್ತಿದ್ದಾರೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರಕಾರಗಳು ಭ್ರಷ್ಟರ ವಿರುದ್ಧ ಕ್ರಮ ಜರುಗಿಸುವ ಮೂಲಕ ವಿವಿಯನ್ನು ಉಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಮುಹಮ್ಮದ್ ದಸ್ತಗೀರ್, ಪದಾಧಿಕಾರಿಗಳಾದ ಫಾರೂಕ್, ಸುಹೈಲ್, ಜಮೀರ್, ಜುನೈದ್, ಉಮರ್ ಇತರರಿದ್ದರು.
Next Story





