ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನಾಚರಣೆ: ಐಕ್ಯತೆಗಾಗಿ ಓಟ

ಉಡುಪಿ, ಅ.31: ಉಡುಪಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ವತಿಯಿಂದ ಸರ್ದಾರ್ ವಲ್ಲಭಬಾಯ್ ಪಟೇಲರ ಜನ್ಮದಿನದ ಅಂಗವಾಗಿ ಐಕ್ಯತೆಗಾಗಿ ಓಟ ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಗಿತ್ತು.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಸಂಜೀವ ಎಂ.ಪಾಟೀಲ್ ಅಜ್ಜರ ಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಈ ಐಕ್ಯತಾ ಓಟಕ್ಕೆ ಚಾಲನೆ ನೀಡಿದರು. ಅಲ್ಲಿಂದ ಆರಂಭಗೊಂಡ ಓಟವು ಸೈಂಟ್ ಸಿಸಿಲಿ ಶಾಲೆ, ಸಿಂಡಿಕೇಟ್ ಟವರ್, ಜೋಡುಕಟ್ಟೆ ಮಾರ್ಗವಾಗಿ ಅಜ್ಜರಕಾಡು ಪುರಭವನದ ಎದುರು ಸಮಾಪ್ತಿಗೊಂಡಿತು.
ಈ ಓಟದಲ್ಲಿ ಎಸ್ಪಿ ಸಂಜೀವ ಪಾಟೀಲ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ, ಡಿವೈಎಸ್ಪಿ ಕುಮಾರಸ್ವಾಮಿ, ಜಿಲ್ಲೆಯ ಪೊಲೀಸ್ ನಿರೀಕ್ಷಕರು, ಉಪ ನಿರೀಕ್ಷಕರು, ಸಿಬ್ಬಂದಿಗಳು, ಕ್ರೀಡಾಪಟುಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.
Next Story





