Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಂಟಿಕೊಪ್ಪ : ಶ್ರೀ ನಾರಾಯಣ ಗುರುಗಳ...

ಸುಂಟಿಕೊಪ್ಪ : ಶ್ರೀ ನಾರಾಯಣ ಗುರುಗಳ 163ನೇ ಜಯಂತೋತ್ಸವ

ವಾರ್ತಾಭಾರತಿವಾರ್ತಾಭಾರತಿ1 Nov 2017 6:36 PM IST
share

ಸುಂಟಿಕೊಪ್ಪ,ನ.1: ಸಮಾಜದ ಉನ್ನತೀಕರಣಕ್ಕೆ ತುಳಿತಕ್ಕೆ ಒಳಗಾದವರಿಗೆ ನ್ಯಾಯ ದೊರಕಿಸಿದ ಮಹಾನ್ ಮಾನವತಾವಾದಿ ಶ್ರೀ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶವನ್ನು ಮೈಗೂಡಿಸಿಕೊಳ್ಳುವ ಮೂಲಕ ಸಮಾಜ ಬಾಂಧವರು ಮುಖ್ಯವಾಹಿನಿಗೆ ಬರಬೇಕು ಎಂದು ಪುತ್ತೂರು ಬಿಲ್ಲವ ಸಮಾಜದ ಅಧ್ಯಕ್ಷರಾದ ಜಯಂತ್ ನಡುಬೈಲ್ ಹೇಳಿದರು.

 ಸುಂಟಿಕೊಪ್ಪದ ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದ ವತಿಯಿಂದ ಶ್ರೀ ನಾರಾಯಣ ಗುರುಗಳ 163ನೇ ಜಯಂತೋತ್ಸವ ಹಾಗೂ ದೇಯಿಬೈದೇದಿ ಬಿಲ್ಲವ ಮಹಿಳಾ ಸಂಘದ 6ನೇ ವಾರ್ಷಿಕೋತ್ಸವ ಸಮಾರಂಭವನ್ನು ಇಲ್ಲಿನ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು ಮೇಲ್ವರ್ಗದ ತುಳಿತಕ್ಕೆ ಅನಾಗರಿಕರಂತೆ ಸಮಾಜದಲ್ಲಿ ಒಳಗಾಗಿ ನಡೆಸುತ್ತಿದ್ದ ಹಿಂದುಳಿದ ವರ್ಗದವರಿಗೆ ನ್ಯಾಯ ದೊರಕಿಸಿಕೊಡಲು ಎಷ್ಟೋ ಕಷ್ಟ ಕಾರ್ಪಣ್ಯಗಳನ್ನು ಸಹಿಸಿಕೊಂಡು ದೇವಾಲಯ ನಿರ್ಮಿಸಿ, ವಿದ್ಯಾಮಂದಿರವನ್ನು ಕಟ್ಟಿಕೊಂಡು ಸಮಾಜದಲ್ಲಿ ಸಮಾನತೆಯಿಂದ ಎಲ್ಲರೂ ಸಹಬಾಳ್ವೆ ನಡೆಸಲು ನಾರಾಯಣ ಗುರುಗಳು ಅನುವು ಮಾಡಿಕೊಟ್ಟರೆಂದು ಬಣ್ಣಿಸಿದರು. 

 ಹೆಣ್ಣು ಮಕ್ಕಳು ಕಡಿಮೆ ಇಲ್ಲಿ : ಬಿಲ್ಲವ ಸಮಾಜದ ಸಂಸ್ಕೃತಿ ಆಚಾರ ವಿಚಾರಗಳನ್ನು ಮಹಿಳೆಯರು ರೂಢಿಸಿಕೊಳ್ಳಬೇಕು. ಸಮಾಜದ ಮುಖ್ಯಸ್ತರಗಳಲ್ಲಿ ಪುರುಷರಷ್ಟೆ ಸಮಾನವಾಗಿ ಮುಂದೆ ಬರಬೇಕು. ಅಂತರ್‍ಜಾಲ ತಾಣಗಳಾದ ವಾಟ್ಸ್ ಆಫ್, ಪೇಸ್‍ಬುಕ್‍ಗೆ ಮೊರೆ ಹೊಗದೆ ಜೀವನದಲ್ಲಿ ಕಠಿಣ ಶ್ರಮದಿಂದ ಸಾಧನೆ ಮಾಡಬೇಕು ದೇವಸ್ಥಾನಗಳಿಗೆ ತೆರಳುವಾಗ ಹೆಣ್ಣು ಮಕ್ಕಳು ಆಧುನಿಕ ಉಡುಪು ಧರಿಸಿ ಹೋಗುವುದು ಸಂಸ್ಕಾರ ಅಲ್ಲ ಎಂದು ಅಂತಾರಾಷ್ಟ್ರೀಯ ಕರಾಟೆಪಟು ಕುಮಾರಿ ಮಮತಾ ಪೂಜಾರಿ ಹೇಳಿದರು.

 ಮುಖ್ಯ ಭಾಷಣಕಾರರಾಗಿ ಆಗಮಿಸಿದ ವಕೀಲರಾದ ನವನೀತ್ ಡಿ.ಹಿಂಬಾಣಿ ಅವರು ಎಲ್ಲಾರಿಗೂ ಸಾಮಾಜಿಕ ನ್ಯಾಯಸಿಗಬೇಕೆಂದು ಪ್ರತಿಪಾದಿಸಿ ಅದರಲ್ಲಿ ಯಶಸ್ವಿಯಾದ ಶ್ರೀ ನಾರಾಯನ ಗುರುಗಳು ಕೇವಲ ಒಂದು ಸಮಾಜಕ್ಕೆ ಸೀಮಿತವಾದ ವ್ಯಕ್ತಿಯಲ್ಲಿ ಪ್ರಪಂದಾದ್ಯಂತ ಅವರ ಆದರ್ಶಗಳನ್ನು ಇಂದು ಪರಿಪಾಲಿಸುತ್ತಿದ್ದಾರೆ ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂದು ಸಮಾಜದಲ್ಲಿ ಸಮಾನತೆಗೆ ಒತ್ತು ನೀಡಿದರಲ್ಲದೆ ಶಿಕ್ಷಣಕ್ಕೆ ಆದ್ಯತೆ ನೀಡಿದರು. ಪೋಷಕರು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಬೇಕು. ರಾಜಕೀಯ ಸೇರಿದಂತೆ ಎಲ್ಲಾ ಕ್ಷೆತ್ರದಲ್ಲೂ ತಮ್ಮ ಪ್ರಾಬಲ್ಯ ತೋರಿಸಬೇಕೆಂದು ಕರೆನೀಡಿದರು.

ಅಧ್ಯಕ್ಷತೆಯನ್ನು ವಹಿಸಿ ಸುಂಟಿಕೊಪ್ಪ ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಬಿ.ಎಂ.ಮಣಿ ಮುಖೇಶ್ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಪುತ್ತೂರಿನ ಸಾಹಿತಿಗಳೂ ಯುವ ಚಿಂತಕರಾದ ಶೈಲೇಶ್ ಐರ್ವ, ಸುಳ್ಯ ಬಿಲ್ಲವ ಯುವ ವಾಹಿನಿ ಅಧ್ಯಕ್ಷ ಶಿವಪ್ರಸಾದ್ ಸೋಮವಾರಪೇಟೆ ತಾಲೂಕು ಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಎನ್.ಡಿ.ಕೃಷ್ಣಪ್ಪ ವಿರಾಜಪೇಟೆ ತಾಲೂಕು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ್ (ರಾಜ), ಕುಶಾಲನಗರ ಹೋಬಳಿ ಕೋಟಿ ಚೆನ್ನಯ್ಯ ಬಿಲ್ಲವ ಸಮಾಜದ ಅಧ್ಯಕ್ಷ ಹೆಷ್.ಬಿ ರಮೇಶ್, ಸುಂಟಿಕೊಪ್ಪ ಹೋಬಳಿ ದೇಯಿ ಬೈದೇದಿ ಬಿಲ್ಲವ ಮಹಿಳಾ ಸಮಾಜದ ಅಧ್ಯಕ್ಷೆ ಮಧು ನಾಗಪ್ಪ ಆಮಿಸಿ ಮಾತನಾಡಿದರು. 

ಮೊದಲಿಗೆ ಜಯಂತಿ ಕೃಷ್ಣಪ್ಪ ಪ್ರಾರ್ಥಿಸಿ, ಮಧುನಾಗಪ್ಪ ಸ್ವಾಗತಿಸಿ, ಶ್ರೀನಾರಾಯಣ ಗುರು ಬಿಲ್ಲವ ಸೇವಾ ಸಂಘದ ಉಪಾಧ್ಯಕ್ಷರಾದ ಎಂ.ಎಸ್.ಸುನೀಲ್ ನಿರೂಪಿಸಿ, ವೆಂಕಪ್ಪ ಕೋಟ್ಯಾನ್ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X