ಈಜಲು ತೆರಳಿದ್ದ 13 ವರ್ಷದ ಬಾಲಕ ನೀರುಪಾಲು

ಸಾಂದರ್ಭಿಕ ಚಿತ್ರ
ಶಿವಮೊಗ್ಗ, ನ. 1: ಸ್ನೇಹಿತರ ಜೊತೆ ಈಜಾಡಲು ತೆರಳಿದ್ದ ವಿದ್ಯಾರ್ಥಿಯೋರ್ವ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಗರದ ಹೊರವಲಯ ಕಲ್ಲೂರು ಗ್ರಾಮದ ತುಂಗಾ ನಾಲೆಯಲ್ಲಿ ಬುಧವಾರ ನಡೆದಿದೆ.
ರಾಮಣ್ಣ ಎಂಬವರ ಪುತ್ರ ಗಗನ್ (13) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ಸನ್ಸಿಟಿ ಶಾಲೆಯಲ್ಲಿ 8 ನೇ ತರಗತಿ ಅಭ್ಯಾಸ ಮಾಡುತ್ತಿದ್ದ. ಬುಧವಾರ ಕನ್ನಡ ರಾಜೋತ್ಸವದ ಹಿನ್ನೆಲೆಯಲ್ಲಿ ಶಾಲೆಗೆ ರಜೆಯಿದ್ದ ಕಾರಣದಿಂದ ಸ್ನೇಹಿತರ ಜೊತೆ ಕಲ್ಲೂರು ಬಳಿಯಿರುವ ತುಂಗಾ ನಾಲೆಯಲ್ಲಿ ಈಜಾಡಲು ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಅಗ್ನಿಶಾಮಕ ದಳ, ಪೊಲೀಸರು ಹಾಗೂ ನುರಿತ ಈಜುಗಾರರು ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಪತ್ತೆ ಹಚ್ಚುವಲ್ಲಿ ಸಫಲರಾಗಿದ್ದಾರೆ. ಘಟನಾ ಸ್ಥಳಕ್ಕೆ ಸಬ್ ಇನ್ಸ್ಪೆಕ್ಟರ್ ಗಿರೀಶ್ರವರು ಭೇಟಿಯಿತ್ತು ಪರಿಶೀಲನೆ ನಡೆಸಿದರು. ಈ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





