ಮಂಗಳೂರು: ವಿಕಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ

ಮಂಗಳೂರು, ನ. 1: ನಗರದ ವಿಕಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಪುತ್ತೂರು ವಿವೇಕಾನಂದ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ರೋಹಿಣಾಕ್ಷ ಶಿರ್ಲಾಲು, ಎಲ್ಲಿ ಹೋದರೂ ಕನ್ನಡವನ್ನು ಮರೆಯಬಾರದು. ಮಾತೃ ಭಾಷೆಗಿರುವ ತೂಕ ಇನ್ಯಾವುದಕ್ಕೂ ಇರಲಾರದು. ಎಲ್ಲಾ ಭಾಷೆಯೂ ಬೇಕು, ಆದರೆ ನಮ್ಮ ಭಾಷೆಯ ಬಗ್ಗೆ ಅಭಿಮಾನವಿರಬೇಕು. ವೃತ್ತಿಯಾವುದೇ ಆಗಿರಲಿ, ಪ್ರವೃತ್ತಿಯಲ್ಲಿ ಕನ್ನಡ ಭಾಷೆಯನ್ನು ಬೆಳೆಸುವ ಕೆಲಸ ನಮ್ಮಿಂದಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಸಂಚಾಲಕ ಡಾ.ಡಿ ಶ್ರೀಪತಿ ರಾವ್, ದೈನಂದಿನ ಜೀವನದಲ್ಲಿ ಸಾಧ್ಯವಾದಷ್ಟು ಕನ್ನಡವನ್ನು ಬಳಸಬೇಕು. ಕನ್ನಡತನವನ್ನು ಉಳಿಸಬೇಕು ಎಂದರು.ವೇದಿಕೆಯಲ್ಲಿ ವಿಕಾಸ್ ಎಜ್ಯುಕೇಷನ್ ಟ್ರಸ್ಟ್‌ನ ಟ್ರಸ್ಟಿಗಳಾದ ಜೆ.ಕೊರಗಪ್ಪ, ವಿಕಾಸ್ ಶಿಕ್ಷಣ ಸಮೂಹ ಸಂಸ್ಥೆಯ ಸಮನ್ವಯಾಧಿಕಾರಿ ಪಾರ್ಥಸಾರಥಿ ಪಾಲೆಮಾರ್, ಆಡಳಿತಾಧಿಕಾರಿ ವಿದ್ಯಾ ಕಾಮತ್, ಕನ್ನಡ ವಿಭಾಗದ ಮುಖ್ಯಸ್ಥೆ ಶೋಭಾ ಪಿ. ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಅನ್ನಪೂರ್ಣ ಸ್ವಾಗತಿಸಿ, ವೇದಾ ಪರಿಚಯಿಸಿದರು, ಪ್ರಥಮ್ ವಂದಿಸಿದರು, ತುಷಿತಾ ಅರುಣ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಗೆ ಆಶು ಭಾಷಣ, ಭಾವಗೀತೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.







