Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕ್ಷೀರಭಾಗ್ಯ: ಏಲಕ್ಕಿ ಸುವಾಸಿತ ಹಾಲಿನ...

ಕ್ಷೀರಭಾಗ್ಯ: ಏಲಕ್ಕಿ ಸುವಾಸಿತ ಹಾಲಿನ ಜೊತೆ ಸಿಗಲಿದೆ ಚಾಕೋಲೆಟ್

ಮೈಸೂರು,ರಾಯಚೂರಿನಲ್ಲಿ ಪ್ರಾಯೋಗಿಕವಾಗಿ ಆರಂಭ

ವಾರ್ತಾಭಾರತಿವಾರ್ತಾಭಾರತಿ1 Nov 2017 9:25 PM IST
share
ಕ್ಷೀರಭಾಗ್ಯ:  ಏಲಕ್ಕಿ ಸುವಾಸಿತ ಹಾಲಿನ ಜೊತೆ ಸಿಗಲಿದೆ ಚಾಕೋಲೆಟ್

ಮೈಸೂರು,ನ.1: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕ್ಷೀರ ಭಾಗ್ಯ ಯೋಜನೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ವಾರದಲ್ಲಿ 3 ದಿನ ಚಾಕೋಲೆಟ್ ಸುವಾಸಿತ ಹಾಗೂ 2 ದಿನ ಏಲಕ್ಕಿ ಸುವಾಸಿತ ಹಾಲನ್ನು ಮಕ್ಕಳಿಗೆ ನೀಡುವ ಕಾರ್ಯಕ್ರಮಕ್ಕೆ ಮೈಸೂರಿನಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬುಧವಾರ ವಿದ್ಯುಕ್ತವಾಗಿ ಚಾಲನೆ ನೀಡಿದರು.

ನಗರದ ಪೀಪಲ್ಸ್ ಪಾರ್ಕ್‍ನಲ್ಲಿ ಹಾಲು ವಿತರಣೆ ಮಾಡಿ ಬಳಿಕ ಮಾತನಾಡಿದ ಸಚಿವರು, ಶಾಲಾ ಮಕ್ಕಳ ಅಭಿಪ್ರಾಯ ಹಾಗೂ ಬೇಡಿಕೆಯಂತೆ ಚಾಕೋಲೆಟ್ ಮತ್ತು ಏಲಕ್ಕಿ ಸುವಾಸಿತ ಹಾಲು ನೀಡುವ ಯೋಜನೆಯನ್ನು ಪ್ರಾಯೋಗಿಕವಾಗಿ ಮೈಸೂರು ಮತ್ತು ರಾಯಚೂರಿನಲ್ಲಿ ಆರಂಭಿಸಲಾಗಿದೆ ಎಂದರು. ಮಕ್ಕಳ ಅಪೌಷ್ಠಿಕತೆ ನಿವಾರಣೆ ಮತ್ತು ಉತ್ತಮ ಬೆಳವಣಿಗೆಗೆ ಹಾಲು ನೀಡುವ ಕ್ಷೀರ ಭಾಗ್ಯ ಯೋಜನೆಯನ್ನು ನಮ್ಮ ಸರ್ಕಾರ  ಆರಂಭಿಸಿದೆ. ಮೊದಲು ವಾರದಲ್ಲಿ ಮೂರು ದಿನ ಕೊಡುತ್ತಿದ್ದೆವು. ಮಕ್ಕಳ ಕೋರಿಕೆಯಂತೆ ಐದು ದಿನಕ್ಕೆ ವಿಸ್ತರಿಸಲಾಯಿತು. ಈಗ ಸುವಾಸಿತ ಹಾಲು ಕೊಡಲು ಆರಂಭಿಸುತ್ತಿದ್ದು ಮಕ್ಕಳು ಹೆಚ್ಚು ಪ್ರೀತಿಯಿಂದ ಸ್ವೀಕರಿಸಿ, ಆರೋಗ್ಯವಂತರಾಗಬೇಕು ಎಂದರು. ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ನಿಮ್ಮ ಸ್ನೇಹಿತರು, ನೆರೆಹೊರೆಯವರು ಶಾಲೆಯಿಂದ ಹೊರಗೆ ಉಳಿದಿದ್ದರೆ ಕರೆ ತರಬೇಕು ಎಂದರು.

ಎಲ್ಲಾ ಮಕ್ಕಳಿಗೂ ಹಾಲು, ಮೊಸರು, ಮಜ್ಜಿಗೆ, ಬೆಣ್ಣೆ, ತುಪ್ಪ ಸಿಗುವುದಿಲ್ಲ. ಇದರಿಂದ ಪೌಷ್ಠಿಕತೆ ಕೊರತೆಯಾಗಿತ್ತು.  ಇದನ್ನು ಮನಗಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೀರಭಾಗ್ಯ ಯೋಜನೆ ಜಾರಿಗೆ ತಂದು ಕೊರತೆ ನೀಗಿಸಿದ್ದಾರೆ ಎಂದರು. 

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಿ.ರಂದೀಪ್, ಮೈಸೂರು ಹಾಗೂ ಚಾಮರಾಜನಗರ  ಹಾಲು ಒಕ್ಕೂಟದ ಅಧ್ಯಕ್ಷ ಕೆ.ಜಿ.ಮಹೇಶ್, ಮೇಯರ್ ರವಿಕುಮಾರ್, ನಗರ ಪಾಲಿಕೆ ಆಯುಕ್ತ ಜೆ.ಜಗದೀಶ್, ಡಿಡಿಪಿಐ ಡಾ.ಬಿ.ಎಸ್.ವರ್ಧನ್, ಶಾಸಕ ಎಂ.ಕೆ.ಸೋಮಶೇಖರ್,  ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X