ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು
ಭಟ್ಕಳ, ನ. 1: ಮಂಕಿಯಿಂದ ಕಾರ್ಕಳದ ಕಡೆಗೆ ಬರುತ್ತಿದ್ದ ಗದಗ ಮೂಲದ ವ್ಯಕ್ತಿಯೋರ್ವರ ಬೈಕ್ ಗೆ ಭಟ್ಕಳದ ಮುರ್ಡೇಶ್ವರದ ಬೈಲೂರು ಸುಳ್ಯೇಬಿಳುವಿನ ಸಸಿಪಾಲ ಕ್ಷೇತ್ರದ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಗದಗ ಜಿಲ್ಲೆಯ ರೋಣ ತಾಲೂಕಿನ ರಮೇಶ ಹನುಮಂತ ಗೊಲ್ಲುರು (26) ಮೃತರು ಎಂದು ಗುರುತಿಸಲಾಗಿದೆ. ಮಂಕಿಯಿಂದ ಕಾರ್ಕಳದ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದು ವೇಳೆ ಭಟ್ಕಳದಿಂದ ಹೊನ್ನಾವರದ ಕಡೆಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಅವರನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ತುರ್ತು ಚಿಕಿತ್ಸೆ ನೀಡಿ ನಂತರ ಉಡುಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅವರು ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





