ಸಿದ್ಧಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಚಾರಗೋಷ್ಠಿ

ಬಂಟ್ವಾಳ, ನ. 1: ರಾಜ್ಯದಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯ ಸೇರಿದಂತೆ ಸಾಂಸ್ಕೃತಿಕ ಕಲೆಯ ಸೊಬಗು ಮತ್ತು ಇದರ ಮಹತ್ವ ಬಗ್ಗೆ ಶಿಕ್ಷಣದ ಜೊತೆಗೆ ಮಕ್ಕಳಿಗೆ ಭಾಷಾಭಿಮಾನ ಮೂಡಿಸಬೇಕು ಎಂದು ಮೂಡಬಿದಿರೆ ಜೈನ್ ಪ್ರೌಢಶಾಲೆ ಮುಖ್ಯ ಶಿಕ್ಷಕ ಮುನಿರಾಜ ರೆಂಜಾಳ ಹೇಳಿದ್ದಾರೆ.
ತಾಲೂಕಿನ ಸಿದ್ಧಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ "ಕನ್ನಡ -ನಾಡು -ನುಡಿ-ಇತಿಹಾಸ- ಪ್ರಸ್ತುತ ಸವಾಲುಗಳು" ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕನ್ನಡ ಸಾಹಿತ್ಯ ಪರಿಷತ್, ಸಂಗಬೆಟ್ಟು ಮತ್ತು ಕುಕ್ಕಿಪಾಡಿ ಗ್ರಾಮ ಪಂಚಾಯತ್, ಬಂಟ್ವಾಳ ರೋಟರಿ ಕ್ಲಬ್, ಸಿದ್ಧಕಟ್ಟೆ ರೋಟರಿ ಸಮುದಾಯ ದಳ, ಶಾಲಾಭಿವೃದ್ಧಿ ಸಮಿತಿ, ಇಂಟರ್ಯಾಕ್ಟ್ ಕ್ಲಬ್, ಎನ್ನೆಸ್ಸೆಸ್ ಘಟಕ ಮತ್ತಿತರ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದರು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಅಧ್ಯಕ್ಷೆ ಗುಲಾಬಿ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಕಸಾಪ ಅಧ್ಯಕ್ಷ ಕೆ.ಮೋಹನ ರಾವ್ ಕಾರ್ಯಕ್ರಮ ಉದ್ಘಾಟಿಸಿದರು.
ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು, ಮಾಜಿ ಸದಸ್ಯ ಸದಸ್ಯ ಕೆ.ರತ್ನಕುಮಾರ್ ಚೌಟ, ಗ್ರಾಪಂ ಸದಸ್ಯ ಎಸ್.ಪಿ.ಶ್ರೀಧರ್, ಕಾಲೇಜಿನ ಪ್ರಾಂಶುಪಾಲ ಶ್ರೀನಿವಾಸ್ ನಾಯಕ್, ಸಿದ್ಧಕಟ್ಟೆ ರೋಟರಿ ಸಮುದಾಯ ದಳ ಅಧ್ಯಕ್ಷ ವಾಸುದೇವ ಆಚಾರ್ಯ, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಬಿ.ಸಂಜೀವ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ಎನ್.ಪ್ರಕಾಶ್ ಕಾರಂತ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸೀತಾರಾಮ ಶಾಂತಿ ಕೆ. ಮತ್ತಿತರರು ಇದ್ದರು.
ಉಪ ಪ್ರಾಂಶುಪಾಲ ರಮಾನಂದ ಸ್ವಾಗತಿಸಿ, ಶಿಕ್ಷಕಿ ಮಮತಾ ಪಿ. ವಂದಿಸಿದರು. ಉಪನ್ಯಾಸಕ ಸಂಜಯ್ ಬಿ.ಎಸ್. ಮತ್ತು ಶಿಕ್ಷಕ ಮಹೇಶ್ ಕುಮಾರ್ ವಿ. ಕರ್ಕೇರಾ ಕಾರ್ಯಕ್ರಮ ನಿರೂಪಿಸಿದರು.







