ನ. 2: ಹನುಮಗಿರಿ ಕ್ಷೇತ್ರಕ್ಕೆ ಒಡೆಯರ್ ಭೇಟಿ
ಪುತ್ತೂರು, ನ. 1: ಮೈಸೂರಿನ ಯಧುವೀರ್ ಶ್ರೀ ಕೃಷ್ಣದತ್ತ ಚಾಮರಾಜ ಒಡೆಯರ್ ನ.2 ರಂದು ಬೆಳಗ್ಗೆ ಈಶ್ವರಮಂಗಲದ ಹನುಮಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ಕ್ಷೇತ್ರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ್ತಮೂಡೆತ್ತಾಯ ತಿಳಿಸಿದ್ದಾರೆ.
ಹನುಮಗಿರಿ ಕ್ಷೇತ್ರಕ್ಕೆ ಯಧುವೀರ್ ಅವರ ಮೂರನೇ ಭೇಟಿ ಇದಾಗಿರುತ್ತದೆ. ಈ ಹಿಂದೆ ಎರಡು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ತೆರಳಿದ್ದರು. 2015 ರಲ್ಲಿ ಮೊದಲ ಬಾರಿಗೆ ಕ್ಷೇತ್ರಕ್ಕೆ ತಾಯಿ ಜೊತೆ ಭೇಟಿ ನೀಡಿದ ಯಧುವೀರ್ ಒಡೆಯರ್ ಅವರು ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುವ ಅನ್ನಛತ್ರಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಿದ್ದರು. ಎರಡನೇ ಬಾರಿಗೆ ಕ್ಷೇತ್ರದಲ್ಲಿ ನಡೆದ ಕೋದಂಡ ರಾಮ ಪ್ರತಿಷ್ಟಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಧರ್ಮ ಪತ್ನಿ ಜೊತೆ ಆಗಮಿಸಿ ಕ್ಷೇತ್ರದಲ್ಲಿ ಇದ್ದುಕೊಂಡು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೀಗ ಮೂರನೇ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.





