ನರಿಂಗಾನ: ಅಲ್ ಮದೀನ ಸ್ಕೂಲ್ ನಲ್ಲಿ ಕನ್ನಡ ರಾಜ್ಯೋತ್ಸವ

ನರಿಂಗಾನ, ನ. 1: ಅಲ್ ಮದೀನ ಇಸ್ಲಾಮಿಕ್ ಕಾಂಪ್ಲೆಕ್ಸ್ ಇದರ ಅಧೀನದ ಅಲ್ ಮದೀನ ಸ್ಕೂಲ್ ಕ್ಯಾಂಪಸ್ ನಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಂಸ್ಥೆಯ ಮ್ಯಾನೇಜರ್ ಅಬ್ದುಲ್ ಖಾದಿರ್ ಸಖಾಫಿ ಧ್ವಜಾರೋಹಣಗೈದರು. ಶಾಲಾ ಸಂಚಾಲಕ ಹಾಜಿ ಅಬ್ದುಲ್ಲಾ ಮೋರ್ಲ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲರಾದ ಹನೀಫ್ ಮಾಸ್ಟರ್ ಸ್ವಾಗತಿಸಿದರು. ಮುನೀರ್ ಅಹ್ಮದ್ ಕಾಮಿಲ್ ಸಖಾಫಿ, ಅಬ್ದುಲ್ ರಝಾಕ್ ಮಾಸ್ಟರ್ ಸಂದೇಶ ಭಾಷಣ ಮಾಡಿದರು.
ವಿದ್ಯಾರ್ಥಿಗಳಿಂದ ಕನ್ನಡ ಸಾಹಿತ್ಯಿಕ- ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ಕಾರ್ಯಕ್ರಮದಲ್ಲಿ ಶಾಲಾ ಸಮಿತಿಯ ನಿರ್ದೇಶಕ ಮುಹಮ್ಮದ್ ಕುಂಞಿ ಅಮ್ಜದಿ, ಆಂಗ್ಲ ಮಾಧ್ಯಮ ಮದರಸ ಮುಖ್ಯೋಪಾಧ್ಯಾಯ ಅಬೂಬಕರ್ ಮದನಿ ಪಡಿಕ್ಕಲ್ , ಸಂಸ್ಥೆಯ ಶಿಕ್ಷಕ, ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅ
ಲ್ ಮದೀನ ಕನ್ನಡ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ಹಾರಿಸ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
Next Story





