ಫಲಾಹ್ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ

ಮಂಗಳೂರು, ನ.1: ತಲಪಾಡಿಯ ಫಲಾಹ್ ವಿದ್ಯಾಸಂಸ್ಥೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವವ ಕಾರ್ಯಕ್ರಮದಲ್ಲಿ ಶಾಲಾ ಕೋಶಾಧಿಕಾರಿ ಹಾಜಿ ಇಸ್ಮಾಯೀಲ್ ನಾಗತೋಟ, ಸದಸ್ಯರಾದ ಅಬ್ಬಾಸ್ ಉಚ್ಚಿಲ್ ಹಾಗೂ ವಿದ್ಯಾರ್ಥಿಗಳಾದ ಸಜಿನಾ ಪರ್ವೀನ್, ಆಯಿಶಾ ಪರ್ವೀನ್, ನಿಶ್ಮಿತಾ ರಾಜ್ಯೋತ್ಸವದ ಬಗ್ಗೆ ಮಾತನಾಡಿದರು.
ಈ ಸಂದರ್ಭ ಅಧ್ಯಕ್ಷ ಹಾಜಿ ಯು.ಬಿ. ಮುಹಮ್ಮದ್, ಕಾರ್ಯದರ್ಶಿ ಬಶೀರ್ ತಲಪಾಡಿ, ಸದಸ್ಯ ಎನ್. ಅರಬಿ ಕುಂಞಿ, ಪ್ರಾಂಶುಪಾಲ ಅಬ್ದುಲ್ ಖಾದರ್ ಹುಸೈನ್, ಕನ್ನಡ ಮಾಧ್ಯಮ ಪ್ರೌಢಶಾಲಾ ಮುಖ್ಯ ಶಿಕ್ಷಕ ಮುಹಮ್ಮದ್ ರಫೀಕ್, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕಿ ಆಯಿಶಾ ಸಬೀನಾ ಕೈಸೀರಾನ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಶಿಕ್ಷಣಾರ್ಥಿ ಸುಕನ್ಯಾ ಕಾರ್ಯಕ್ರಮ ನಿರೂಪಿಸಿದರು. ನವ್ಯಾ.ಕೆ ವಂದಿಸಿದರು.
Next Story





