Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಿಂಗಾಯತ ಧರ್ಮ ಪ್ರತ್ಯೇಕ ಸಾಂವಿಧಾನಿಕ...

ಲಿಂಗಾಯತ ಧರ್ಮ ಪ್ರತ್ಯೇಕ ಸಾಂವಿಧಾನಿಕ ಮಾನ್ಯತೆಗೆ ಆಗ್ರಹ : ನ.19 ರಂದು ರಾಷ್ಟ್ರೀಯ ಬೃಹತ್ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ2 Nov 2017 7:18 PM IST
share
ಲಿಂಗಾಯತ ಧರ್ಮ ಪ್ರತ್ಯೇಕ ಸಾಂವಿಧಾನಿಕ ಮಾನ್ಯತೆಗೆ ಆಗ್ರಹ : ನ.19 ರಂದು ರಾಷ್ಟ್ರೀಯ ಬೃಹತ್ ಸಮಾವೇಶ

ಬೆಂಗಳೂರು, ನ.2: ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಸಾಂವಿಧಾನಿಕ ಮಾನ್ಯತೆಗಾಗಿ ಒತ್ತಾಯಿಸಿ ನ.19ರಂದು ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಲಿಂಗಾಯತ ಸಮುದಾಯದ ರಾಷ್ಟ್ರೀಯ ಬೃಹತ್ ಸಮಾವೇಶ ನಡೆಸಲು ಲಿಂಗಾಯತ ಧರ್ಮ ಮಹಾಸಭಾ ನಿರ್ಧರಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಮುಖಂಡರಾದ ಡಾ.ಮಾತೆ ಮಹಾದೇವಿ, ಲಿಂಗಾಯತ ಒಂದು ಸ್ವತಂತ್ರ ಧರ್ಮವಾಗಿದ್ದು, ಒಂದು ಜಾತಿ, ಪಂಥಕ್ಕೆ ಸೇರುವುದಿಲ್ಲ. ಜೈನ, ಬೌದ್ಧ ಧರ್ಮಗಳಂತೆ ಲಿಂಗಾಯತ ಧರ್ಮಕ್ಕೂ ಸ್ವತಂತ್ರ ಧರ್ಮದ ಮಾನ್ಯತೆ ಸಿಗಬೇಕು. ಈ ಕುರಿತು ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಸಲ್ಲಿಸಬೇಕು ಎಂದು ಆಗ್ರಹಿಸಿದರು.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಈಗಾಗಲೇ ಹಲವಾರು ಮಠಾಧೀಶರು, ಲಿಂಗಾಯತ ಮುಖಂಡರು ಮನವಿ ಸಲ್ಲಿಸಿದ್ದೇವೆ. ಆದರೆ, ಈ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನ ನಿಲುವನ್ನು ಪ್ರದರ್ಶಿಸಿ ಎಂದು ಸಿಎಂ ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದರು.
 ಲಿಂಗಾಯತ ಧರ್ಮ ಪ್ರಗತಿಪರವಾಗಿದ್ದು, ವೈಚಾರಿಕ ಧರ್ಮವಾಗಿದೆ. ಸಮಾನತೆಯನ್ನು ಬಯಸುತ್ತದೆ. ಈ ಧರ್ಮದ ತತ್ವ ಮತ್ತು ಆದರ್ಶಗಳು, ಸಿದ್ಧಾಂತಗಳು ವಿಶ್ವಕ್ಕೆ ಪ್ರಚಲಿತವಾಗಬೇಕು. ಈ ಧರ್ಮದಲ್ಲಿ ಎಲ್ಲಾ ಜಾತಿ, ವರ್ಗದ ಅನುಯಾಯಿಗಳಿದ್ದು, ಸುಮಾರು 73 ಉಪಜಾತಿಗಳು ಇದರಲ್ಲಿ ಸೇರ್ಪಡೆಯಾಗಿವೆ. ಹೀಗಾಗಿ, ಕೇಂದ್ರ ಸರಕಾರ ಅಲ್ಪಸಂಖ್ಯಾತರ ಸ್ಥಾನಮಾನ ನೀಡಿದಲ್ಲಿ ಈ ಎಲ್ಲಾ ವರ್ಗಗಳ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ದಾರಿ ತಪ್ಪಿಸದಿರಿ: ಅಖಿಲ ಭಾರತ ವೀರಶೈವ ಮಹಾಸಭಾ ವೀರಶೈವ-ಲಿಂಗಾಯತ ಎರಡೂ ಸೇರಿ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ನೀಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ದಾರಿ ತಪ್ಪಿಸುತ್ತಿದೆ. ಆದರೆ, ಲಿಂಗಾಯತ-ವೀರಶೈವ ಎರಡೂ ಒಂದಾಗಲು ಸಾಧ್ಯವಿಲ್ಲ. ವೀರಶೈವ ಎನ್ನುವುದು ಶೈವದ ಒಂದು ಪಂಥ. ವೀರಶೈವಕ್ಕೆ ಬೇಕಾದರೆ ಪ್ರತ್ಯೇಕ ಧರ್ಮ ನೀಡಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಹೇಳಿದರು.

ಗೋಳಾಕಾರದ ಇಷ್ಟಲಿಂಗವನ್ನು ಆರಾಧಿಸುವವರು ಲಿಂಗಾಯಿತರು. ವೀರಶೈವರು ಬಸವಣ್ಣನವರನ್ನು ಧರ್ಮ ಗುರುವಾಗಿ, ವಚನ ಸಾಹಿತ್ಯವನ್ನು ಧರ್ಮಸಂಹಿತೆ ಎಂದು ಪರಿಗಣಿಸಲಿ. ಕನ್ನಡವನ್ನು ಧರ್ಮ ಭಾಷೆಯಾಗಿ ವೀರಶೈವರು ಒಪ್ಪಿಕೊಳ್ಳಬೇಕು. ಹಾಗಿದ್ದಲ್ಲಿ ಮಾತ್ರ ವೀರಶೈವರನ್ನು ಲಿಂಗಾಯತರಾಗಿ ಒಪ್ಪಿಕೊಳ್ಳುತ್ತೇವೆ ಎಂದು ಪ್ರತಿಪಾದಿಸಿದರು.

ನ.19 ರಂದು ನಡೆಯಲಿರುವ ರಾಷ್ಟ್ರ ಮಟ್ಟದ ಸಮಾವೇಶದಲ್ಲಿ ವಿವಿಧ ಮಠಗಳ ಧಾರ್ಮಿಕ ಮುಖಂಡರು, ಅನುಯಾಯಿಗಳು ಭಾಗವಹಿಸಲಿದ್ದು, ಬೇಲಿಮಠದ ಶಿವರುದ್ರ ಸ್ವಾಮೀಜಿಗಳ ಸಾನಿಧ್ಯ ವಹಿಸಲಿದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ್ ಉದ್ಘಾಟಿಸಲಿದ್ದು, ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ್, ಪ್ರಗತಿಪರ ಚಿಂತಕರಾದ ಸಿ.ಎಸ್.ದ್ವಾರಕಾನಾಥ್, ಕೆ.ಎಂ.ನಟರಾಜ್, ರಿಪಬ್ಲಿಕನ್ ಪಾರ್ಟಿ ಅಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅರವಿಂದ ಮಾಲಗತ್ತಿ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ ಎಂದರು. ಇದೇ ಸಂದರ್ಭದಲ್ಲಿ 1995ರಲ್ಲಿ ಸ್ಥಾಪನೆಯಾದ ಲಿಂಗಾಯತ ಧರ್ಮ ಮಹಾಸಭಾ ಟ್ರಸ್ಟ್‌ನ 22ನೇ ವಾರ್ಷಿಕೋತ್ಸವವನ್ನು ಸಹ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

‘‘ಲಿಂಗಾಯತ-ವೀರಶೈವರು ಹಿಂದೂ ಧರ್ಮದ ಎರಡು ಸಂಪ್ರದಾಯಗಳಾಗಿದ್ದು, ಇವೆರಡೂ ಹಿಂದೂ ಧರ್ಮದಿಂದ ಬೇರೆಯಾಗಬಾರದು ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ನೀಡಿರುವ ಹೇಳಿಕೆಯನ್ನು ನಾವು ಒಪ್ಪುವುದಿಲ್ಲ. ಲಿಂಗಾಯತ ಹಿಂದೂ ಧರ್ಮಕ್ಕಿಂತ ಭಿನ್ನವಾಗಿದೆ, ಹಿಂದೂ ಧರ್ಮದ ವೇದ, ಪುರಾಣ, ಶಾಸ್ತ್ರ, ಜ್ಯೋತಿಷ್ಯ ಇದ್ಯಾವುದನ್ನು ನಾವು ನಂಬುವುದಿಲ್ಲ. ಲಿಂಗಾಯತರಲ್ಲಿ ಅರಿವೇ ಗುರು ಎಂಬ ಅನುಭಾವವಿದೆ. ಹೀಗಾಗಿ, ಶ್ರೀಗಳು ಸಹ ನಮ್ಮ ಹೋರಾಟಕ್ಕೆ ಬೆಂಬಲಿಸಬೇಕು. ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು’’
-ಡಾ.ಮಾತೆ ಮಹಾದೇವಿ, ಲಿಂಗಾಯತ ಮಹಾಸಭಾದ ಮುಖಂಡೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X