ಬಸ್ ಢಿಕ್ಕಿ: ಪಾದಚಾರಿ ಮೃತ್ಯು

ಮಂಗಳೂರು, ನ. 2: ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ಬಿಕರ್ನಕಟ್ಟೆಯಲ್ಲಿ ನಡೆದಿದೆ.
ಮೃತರನ್ನು ಲಿಲ್ಲಿ ಪಿಂಟೊ (65) ಎಂದು ಗುರುತಿಸಲಾಗಿದೆ. ಅವರು ಗುರುವಾರ ಸಂಜೆ ಪ್ರಾರ್ಥನೆಗೆಂದು ಬಿಕರ್ನಕಟ್ಟೆಯ ಬಾಲ ಏಸು ಪುಣ್ಯಕ್ಷೇತ್ರಕ್ಕೆ ತೆರಳಿದ್ದರು. ಪ್ರಾರ್ಥನೆ ಮುಗಿಸಿ ವಾಪಸ್ ಮನೆಗೆ ಹೋಗಲು ರಸ್ತೆ ದಾಟುತ್ತಿದ್ದ ಸಂದರ್ಭ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದಿದೆ. ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





