ಎಸೆಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಆಕ್ಷೇಪಣೆ ಸಲ್ಲಿಸಲು ಅವಕಾಶ
ಬೆಂಗಳೂರು, ನ.2: ಮುಂದಿನ ವರ್ಷದ ಮಾರ್ಚ್ ಹಾಗೂ ಏಪ್ರಿಲ್‌ನಲ್ಲಿ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ಸಿದ್ಧಪಡಿಸಿರುವ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದ್ದು, ಆಕ್ಷೇಪಣೆಗಳನ್ನು ಸಲ್ಲಿಸಲು ನ.24 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮಾ.23 ರಿಂದ ಏ.4 ರವರೆಗೆ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಳಿಯ ವೆಬ್‌ಸೈಟ್www.kseeb.kar.nic.in ನಲ್ಲಿ ಪ್ರಕಟಿಸಿದ್ದು, ಪ್ರಕಟವಾದ 30 ದಿನಗಳೊಳಗೆ ವಿದ್ಯಾರ್ಥಿ ಮತ್ತು ಪೋಷಕರು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ನೇರವಾಗಿ ನಿರ್ದೇಶಕರು(ಪರೀಕ್ಷೆಗಳು) ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, 6 ನೆ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-3 ಇಲ್ಲಿಗೆ ನೇರವಾಗಿ ಅಥವಾ ಅಂಚೆ ಮೂಲಕ ಕಳುಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





